ನಾಪೆÇೀಕ್ಲು, ಆ. 27: ಮಹಿಳೆಯರ ಸಬಲೀಕರಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರವಾಗಿದ್ದು, ಅದರಿಂದ ಮಹಿಳೆಯರು ಆರ್ಥಿಕವಾಗಿ ಹೆಚ್ಚು ಸದೃಢರಾಗಿದ್ದಾರೆ. ಇವರು ಮಹಿಳಾಭಿವೃದ್ಧಿಯ ಹರಿಕಾರ ಎಂದು ನಾಪೆÇೀಕ್ಲು ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಾನಿರಾಣಿ ಅಭಿಪ್ರಾಯಪಟ್ಟರು.

ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಾಜಪೇಟೆ, ಮಡಿಕೇರಿ ಮತ್ತು ಭಾಗಮಂಡಲ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿ, ಗ್ರಾಮಾಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬ ಧ್ಯೇಯೋದ್ಧೇಶದೊಂದಿಗೆ ವೀರೇಂದ್ರ ಹೆಗ್ಗಡೆಯವರು ಜಾತಿ, ಮತ, ಧರ್ಮದ ಬೇಧವಿಲ್ಲದೆ ಸರ್ವರ ಏಳಿಗೆಗೂ ಶ್ರಮಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಾಪೆÇೀಕ್ಲು ಮಹಿಳಾ ಸಮಾಜದ ಅಧ್ಯಕ್ಷೆ ಬೊಪ್ಪಂಡ ಶೈಲಾ ಬೋಪಯ್ಯ ಅಧ್ಯಕ್ಷತೆ ವಹಿಸಿದ್ದ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಸದಸ್ಯೆ ಚೀಯಕ ಪೂವಂಡ ಮುತ್ತುರಾಣಿ ಅಚ್ಚಪ್ಪ ಮಾತನಾಡಿದರು.

ಈ ಸಂದರ್ಭ ನೂತನವಾಗಿ ಒಕ್ಕೂಟಕ್ಕೆ ಆಯ್ಕೆಯಾದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು.

ವೇದಿಕೆಯಲ್ಲಿ ಬಾಳೆಯಡ ದಿವ್ಯ, ಒಕ್ಕೂಟದ ಮೇಲ್ವಿಚಾರಕ ಚೇತನ್, ಉಮಾಲಕ್ಷ್ಮಿ ಮತ್ತಿತರರು ಇದ್ದರು. ಪಿ.ಬಿ. ಗಾಯತ್ರಿ ಪ್ರಾರ್ಥನೆ. ಬಿಂದು ಸ್ವಾಗತ. ಚೇತನ್ ನಿರೂಪಿಸಿ ವಂದಿಸಿದರು.