ವೀರಾಜಪೇಟೆ ಸೆ.21 ವೀರಾಜಪೇಟೆಯ ಕೊಡಗು ಮಾಜಿ ಸೈನಿಕರ ಸಹಕಾರ ಸಂಘದಿಂದ ಇಂದು ವೀರಾಜಪೇಟೆ ಹಳೆ ತಾಲೂಕು ಕಚೇರಿ ಬಳಿ ಇರುವ ಹುತಾತ್ಮ ಯೋಧರ ಸ್ಮಾರಕದಲ್ಲಿ, ಸಂಘದ ಅಧ್ಯಕ್ಷ ಚೇಂದ್ರಿಮಾಡ ನಂಜಪ್ಪ ಅಧ್ಯಕ್ಷತೆಯಲ್ಲಿ ಹುತಾತ್ಮ ಯೋಧರಿಗೆ ಹಾಗೂ ದಿವಂಗತರಾಗಿರುವÀ ಮಾಜಿ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಾಸಕ ಕೆ.ಜಿ. ಬೋಪಯ್ಯ, ಅತಿಥಿಗಳಾಗಿ ನಿವೃತ್ತ ಕರ್ನಲ್ ನೆರಪಂಡ ಚಿಣ್ಣಪ್ಪ, ತಾಲೂಕು ತಹಶೀಲ್ದಾರ್ ಮಹಾದೇವ ಸ್ವಾಮಿ, ಪ.ಪಂ. ಅಧ್ಯಕ್ಷ ಕೂತಂಡ ಸಚಿನ್ ಕುಟ್ಟಯ್ಯ ಹಾಗೂ ಉಪಾಧ್ಯಕ್ಷೆ ತಸ್ಲಿಂ ಅಕ್ತರ್, ಎನ್.ಸಿ.ಸಿ. 9ನೇ ಬೆಟಾಲಿಯನ್‍ನ ಸುಬೇದಾರ್ ರಾಜ್ ಪಾಲ್ ಸಿಂಗ್, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷ ಕರ್ನಲ್ ಸುಬ್ಬಯ್ಯ, ನಿವೃತ್ತ ಕರ್ನಲ್ ಭರತ್, ಸೈನಿಕ ಪುನರ್ವಸತಿ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಗೀತಾ, ಹೊಂ ಗಾರ್ಡ್ ಕಮಾಡೆಂಟ್ ಓಡಿಯಂಡ ಚಿಣ್ಣಪ್ಪ, ನಿವೃತ್ತ ಪೊಲೀಸ್ ಉನ್ನತಾಧಿಕಾರಿ ಮುಕ್ಕಾಟಿರ ಚೋಟು ಅಪ್ಪಯ್ಯ, ಪೊಲೀಸ್ ವೃತ್ತ ನಿರೀಕ್ಷಕ ಶಾಂತ ಮಲ್ಲಪ್ಪ. ಮುಂತಾದವರು ಉಪಸ್ಥಿತರಿದ್ದು ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕೊಡವ ಸಮಾಜದ ಅಧ್ಯಕ್ಷ ವಾಂಚೀರ ನಾಣಯ್ಯ, ತ್ರಿವೇಣಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಚೆರುಮಂದಂಡ ನಾಣಯ್ಯ ಹಾಗೂ ವಿದ್ಯಾರ್ಥಿಗಳು, ಕಾವೇರಿ ಲಘು ವಾಹನ ಚಾಲಕ ಮಾಲೀಕರ ಸಂಘ, ನಾಪೋಕ್ಲು, ಪೊನ್ನಂಪೇಟೆ ಮಾಜಿ ಸೈನಿಕರ ಸಂಘದ ಅಧ್ಯಕ್ಷರು , ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭ ಮಾನಿ ಸೈನಿಕರ ಸಂಘದ ಸದಸ್ಯರು, ಜಿಲ್ಲಾ ಸಶಸ್ತ್ರ ಪಡೆ ಪೊಲೀಸರು ಕುಶಲ ತೋಪುಗಳನ್ನು ಸಿಡಿಸಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ಕಾಶ್ಮೀರದ ಉರಿಯಲ್ಲಿ ಹುತಾತ್ಮರಾದ ಯೋಧರಿಗೂ ವಿಶೇಷವಾಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.