ನಾಪೆÇೀಕ್ಲು. ನ. 25: ನಾಪೆÇೀಕ್ಲು ಗ್ರಾಮ ಪಂಚಾಯಿತಿಯಲ್ಲಿದ್ದ ಸಾರ್ವಜನಿಕ ಶೌಚಾಲಯವನ್ನು ನವೀಕರಿಸುವ ಉದ್ದೇಶದಿಂದ ಒಂದು ತಿಂಗಳ ಹಿಂದೆ ಹಳೇ ಕಟ್ಟಡ ನೆಲ ಸಮಗೊಳಿಸಲಾಗಿದೆ. ಆದರೆ ನೂತನ ಕಟ್ಟಡ ಕಾಮಗಾರಿ ಆರಂಭಿಸದಿರುವ ಹಿನೆÀ್ನಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಶೌಚಾಲಯವಿಲ್ಲದೆ ತೀವ್ರ ತೊಂದರೆಯಾಗಿದೆ. ಕೂಡಲೇ ಶೌಚಾಲಯ ಆರಂಭಿಸಬೇಕು. ತಪ್ಪಿದಲ್ಲಿ ಪಂಚಾಯಿತಿ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಸೇರಿದಂತೆ ಎಲ್ಲಾ ಸದಸ್ಯರ ವಿರುದ್ಧ ಸಂಸ್ಥೆಯಲ್ಲಿ ದೂರು ದಾಖಲಿಸ ಲಾಗುವದು ಎಂದು ಮಡಿಕೇರಿ ತಾಲೂಕು ಮಾನವ ಹಕ್ಕು ಆಯೋಗ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ ಎಚ್ಚರಿಸಿದ್ದಾರೆ.
ಈ ಬಗ್ಗೆ ಪಂಚಾಯಿತಿ ಕಟ್ಟಡದ ಎದುರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು ನಾಪೆÇೀಕ್ಲು ಗ್ರಾಮ ಪಂಚಾಯಿತಿ ಯನ್ನು ಶೌಚ ಮುಕ್ತ ಪಂಚಾಯಿತಿ ಎಂದು ಘೋಷಿಸಲಾಗಿದೆ. ಆದರೆ ಪಟ್ಟಣದಲ್ಲಿ ಪಂಚಾಯಿತಿಯ ಯಾವದೇ ಸಾರ್ವಜನಿಕ ಶೌಚಾಲಯ ವಿಲ್ಲದಿರುವದು ಪಂಚಾಯಿತಿಯ ಆಡಳಿತ ವೈಖರಿಯನ್ನು ಎತ್ತಿ ತೋರಿಸುತ್ತದೆ ಎಂದು ದೂರಿದರು. ಜಿಲ್ಲೆಯ ಬಹುತೇಕ ಪಟ್ಟಣಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ ಇಲ್ಲಿ ಇದರ ನಿಷೇಧಕ್ಕೆ ಪಂಚಾಯಿತಿ ಯಾವದೇ ಸೂಕ್ತ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಹಲವು ಪ್ರತಿಭಟನೆಗಳನ್ನು ನಡೆಸಿ ಮನವಿ ಸಲ್ಲಸಿದರೂ ಯಾವದೇ ಫಲ ದೊರೆತ್ತಿಲ್ಲ. ಈ ಹಿನ್ನೆಲೆಯಲ್ಲಿ ಪಂಚಾಯಿತಿ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಸೇರಿದಂತೆ ಎಲ್ಲಾ ಸದಸ್ಯರ ವಿರುದ್ಧ ಮಾನವ ಹಕ್ಕು ಆಯೋಗ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ವತಿಯಿಂದ ಬೆಂಗಳೂರಿನಲ್ಲಿ ದೂರು ದಾಖಲಿಸಲಾಗುವದು ಎಂದು ಎಚ್ಚರಿಸಿದರು.
ಈ ಸಂದರ್ಭ ಠಾಣಾಧಿಕಾರಿ ಬಿ.ಎಸ್. ವೆಂಕಟೇಶ್ ಪಂಚಾಯಿತಿ ಮಾತನಾಡಿ, ಕಾನೂನನ್ನು ಪಾಲಿಸದಿರುವ ಅಂಗಡಿ ಮಾಲೀಕರ ವಿರುದ್ಧ ಕೈಗೊಳ್ಳಲಿರುವ ಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಲಾಗುವದು ಎಂದು ತಿಳಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಪಂಚಾಯಿತಿ ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ ನೂತನ ಶೌಚಾಯಲಕ್ಕೆ ನಾಲ್ಕು ಲಕ್ಷ ರೂ.ಗಳನ್ನು ಕಾಯ್ದಿರಿಸಲಾಗಿದೆ ಮುಂದಿನ ಏಳು ದಿನಗಳಲ್ಲಿ ಕಾಮಗಾರಿ ಆರಂಭಿಸಲಾಗುವದು ಎಂದು ಭರವಸೆ ನೀಡಿದರು.
ಈ ಸಂದರ್ಭ ಆಯೋಗದ ಸದಸ್ಯರಾದ ಎಂ.ಇ.ಅಬ್ದುಲ್ ರಜಾಕ್, ನಾಗರಾಜ, ಬಿದ್ದಾಟಂಡ ನವೀನ್, ಕುಂಡ್ಯೋಳಂಡ ಸಂಪತ್ ದೇವಯ್ಯ, ಕೇಟೋಳಿರ ರೆಮ್ಮಿ, ದೇವಪ್ಪ, ಗಫೂರ್, ಇಬ್ರಾಹಿಂ, ಹಸೈನಾರ್ ಮತ್ತಿತರರಿದ್ದರು.