ಮಡಿಕೇರಿ, ಜೂ. 14: 2016ರ ಮಾರ್ಚ್ ಮಾಹೆಯಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸಂಬಂಧ ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪತ್ರಿಯನ್ನು ಪಡೆಯಲು ಅರ್ಜಿ ಸಲ್ಲಿಸಿರುವ ಕೆಲವು ವಿದ್ಯಾರ್ಥಿಗಳು ಕಾರಣಾಂತರದಿಂದ ಸ್ಕ್ಯಾನಿಂಗ್ ಪ್ರತಿಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಸಾಧ್ಯವಾಗಿರುವದಿಲ್ಲ. ಅಂತಹ ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ಕೂಡಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಇ-ಮೇಲ್‍ಗೆ ಕಳುಹಿಸಲು ಕೋರಿದೆ.

ವಿದ್ಯಾರ್ಥಿಗಳು ತಮ್ಮ ಹೆಸರು, ದ್ವಿತೀಯ ಪಿಯುಸಿ ಪರೀಕ್ಷಾ ನೋಂದಣಿ ಸಂಖ್ಯೆ, ಪದವಿ ಪೂರ್ವ ಕಾಲೇಜಿನ ಹೆಸರು ಮತ್ತು ಕೋಡ್, ಸ್ಕ್ಯಾನಿಂಗ್ ಉತ್ತರ ಪತ್ರಿಕೆಯನ್ನು ಪಡೆಯಲು ಅರ್ಜಿ ಸಲ್ಲಿಸಿದ ವಿಷಯಗಳು ಮತ್ತು ವಿಷಯ ಸಂಕೇತಗಳು, ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ, ಈ-ಮೇಲ್ ವಿಳಾಸ ಇತ್ಯಾದಿ ಮಾಹಿತಿಯನ್ನು ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಈ ಮೇಲ್ ವಿಳಾಸವಾದ ಜಜಠಿue.mಚಿಜiಞeಡಿi@gmಚಿiಟ.ಛಿom ಇಲ್ಲಿಗೆ ಕಳುಹಿಸಲು ಕೋರಿದೆ.

ಆದ್ದರಿಂದ ಕಚೇರಿಗೆ ಸ್ಕ್ಯಾನಿಂಗ್ ಮಾಡಿದ ಉತ್ತರ ಪತ್ರಿಕೆಗಳ ಪ್ರತಿಯನ್ನು ಪಡೆಯದ ವಿದ್ಯಾರ್ಥಿಗಳು ಮತ್ತು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರು ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪ ನಿರ್ದೇಶಕ ಟಿ. ಸ್ವಾಮಿ ತಿಳಿಸಿದ್ದಾರೆ.