ಮೈಸೂರು ಆ.1 : ಮೈಸೂರಿನ ನ್ಯಾಯಾಲಯದ ಆವರಣದ ಶೌಚಾಲಯದಲ್ಲಿ ನಾಡಾಬಾಂಬ್ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ಕಿಟಕಿ ಗಾಜು, ಗೋಡೆ ಕುಸಿದು ಬಿದ್ದ ಘಟನೆ ಸೋಮವಾರ ನಡೆದಿದೆ. ಘಟನಾ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಸೂರು ನ್ಯಾಯಾಲಯದ ರೈಲ್ವೆ ಗೇಟ್ ಸಮೀಪದ ಶೌಚಾಲಯದ ಆವರಣದಲ್ಲಿ ಮತ್ತೆರಡು ಪೆÇಟ್ಟಣಗಳು ಪತ್ತೆಯಾಗಿದ್ದು, ಲಕ್ಷ್ಮೀಪುರಂ ಠಾಣೆಯ ಪೆÇಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಪೆÇಲೀಸ್ ಮೂಲಗಳು ಹೇಳಿವೆ. ಬಾಂಬ್ ಸ್ಫೋಟದ ಮಾದರಿಯಲ್ಲಿ ಸ್ಫೋಟ ಸಂಭವಿಸಿರುವುದಾಗಿ ವರದಿ ವಿವರಿಸಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಬೆರಳಚ್ಚು ತಜ್ಞರನ್ನು ರವಾನಿಸಲಾಗಿದ್ದು, ತಪಾಸಣೆ ಮುಂದುವರೆದಿದೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿದ್ದು ಯಾವದೇ ಪ್ರಾಣಹಾನಿ ಸಂಭವಿಸಿಲ್ಲ.