ಮಡಿಕೇರಿ, ನ. 20: ಭಾರತ ಸರ್ಕಾರದ ನೆಹರೂ ಯುವ ಕೇಂದ್ರ ಮತ್ತು ಜಿಲ್ಲಾ ಯುವ ಒಕ್ಕೂಟದ ಆಶ್ರಯದಲ್ಲಿ ಇಂದು ಮಡಿಕೇರಿಯ ಹೊಟೇಲ್ ಸಮುದ್ರದಲ್ಲಿ ನೆಹರೂ ಯುವ ಕೇಂದ್ರದ ಸಂಸ್ಥಾಪನಾ ದಿನಾಚರಣೆ ನಡೆಯಿತು. ಈ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಟಾಟು ಮೊಣ್ಣಪ್ಪ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಯಂ.ಬಿ. ಜೋಯಪ್ಪ ವಹಿಸಿದರು. ವೇದಿಕೆಯಲ್ಲಿ ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎ.ಹೆಚ್. ರವಿ ಉಪಸ್ಥಿತರಿದ್ದರು. ಕೇಕಡ ಜೀವಿತಾ ಪ್ರಾರ್ಥನೆ, ಗುಣಶೇಖರ್ ಸ್ವಾಗತಿಸಿ, ಶ್ರೀಹರಿ ವಂದನಾರ್ಪಣೆ ನೆರವೇರಿಸಿದರು.