ಸೋಮವಾರಪೇಟೆ, ಆ. 4: ಸಮೀಪದ ಕಾಟ್ನಮನೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಅಗಲೀಕರಣ ಕಾಮಗಾರಿಗೆ ಶಾಸಕ ರಂಜನ್ ಚಾಲನೆ ನೀಡಿದರು. ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟ್ನಮನೆ ರಸ್ತೆಯು ತೀರ ಕಿರಿದಾಗಿದ್ದು, ಇದರ ಅಗಲೀಕರಣ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಜಿ.ಪಂ. ಸದಸ್ಯೆ ಪೂರ್ಣಿಮ ಗೋಪಾಲ್, ಪಂಚಾಯಿತಿ ಸದಸ್ಯ ಕೆ.ಪಿ. ಹರೀಶ್, ಮಾಜಿ ಉಪಾಧ್ಯಕ್ಷ ಬಸವರಾಜ್ ಹಾಗೂ ಗ್ರಾಮಸ್ಥರು ಹಾಜರಿದ್ದರು.