ಮಡಿಕೇರಿ, ಡಿ. 24: ಕಾಂಗ್ರೆಸ್ ಪಕ್ಷದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಮೂಲಕ ಗ್ರಾಮೀಣ ಭಾಗದ ಫಲಾನುಭವಿಗಳಿಗೆ ಸರಕಾರದ ಯೋಜನೆಗಳನ್ನು ತಲಪಿಸುವಂತೆ ಸಂಘಟನೆಯ ರಾಜ್ಯ ಸಂಚಾಲಕÀ ಬಿ.ಎಂ. ಸಂದೀಪ್ ಕರೆ ನೀಡಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಎಐಸಿಸಿ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಮತ್ತು ಜಿಲ್ಲಾ ಸಮಿತಿಯನ್ನು ಭೇಟಿಯಾಗಿ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಮುಖಂಡರಾದ ಮಣಿಶಂಕರ್ ಅಯ್ಯರ್ ಹಾಗೂ ಮೀನಾಕ್ಷಿ ನಟರಾಜನ್ ಅವರ ನೇತೃತ್ವದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ವ್ಯವಸ್ಥೆಯಡಿ ಜನಪರ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಸಂಘಟನೆಯನ್ನು ಪ್ರಬಲಗೊಳಿಸಬೇಕೆಂದು ಕರೆ ನೀಡಿದರು. ಮುಂದಿನ ತಿಂಗಳಿನಲ್ಲಿ ಸಂಘಟಕರಿಗೆ ತರಬೇತಿ ಶಿಬಿರಗಳನ್ನು ನಡೆಸಲಾಗುವದೆಂದು ತಿಳಿಸಿದರು. ಪ್ರತಿಯೊಬ್ಬ ಸಂಘಟಕರು ಸಂಘಟನೆಯ ಕಾರ್ಯಸೂಚಿಯಂತೆ ನಡೆದುಕೊಂಡು ಪಕ್ಷದ ಬಲ ಹೆಚ್ಚಿಸುವ ಮೂಲಕ ಸರಕಾರದ ಯೋಜನೆಗಳನ್ನು ಜನರಿಗೆ ತಲಪಿಸುವಂತೆ ಸಂದೀಪ್ ಕರೆ ನೀಡಿದರು.

ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ ಅವರು ಮಾತನಾಡಿ, ಕಳೆದ ಮೂರುವರೆ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ಎಲ್ಲಾ ಪ್ರಗತಿಶೀಲ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಸೂಕ್ತವಾದ ಮಾಹಿತಿ ನೀಡಿ ಅವರಲ್ಲಿ ಜಾಗೃತಿಯನ್ನು ಮೂಡಿಸಲಾಗುವ ದೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ರಮೇಶ್ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವದರ ಜೊತೆಗೆ ಸರ್ಕಾರದ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ಪ್ರಜೆಗೂ ತಲಪುವಂತೆ ಮಾಡುವ ಜವಾಬ್ದಾರಿ ಸಂಘಟಕರ ಮೇಲಿದೆ ಎಂದರು. ಈ ಜವಾಬ್ದಾರಿಯನ್ನು ಸಂಘಟಕರು ಕಾರ್ಯರೂಪಕ್ಕೆ ತಂದಲ್ಲಿ ಪಕ್ಷಕ್ಕೂ ಲಾಭವಾಗುವದರ ಜೊತೆಗೆ ಜನಸಾಮಾನ್ಯರಿಗೂ ನ್ಯಾಯ ದೊರ ಕುತ್ತದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಟಿ.ಪ್ರದೀಪ್ ಮಾತನಾಡಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲೆಯಲ್ಲಿ ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸಂಘಟನೆಯ ಕಾರ್ಯ ಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುವದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮೈಸೂರು ಪ್ರಾಂತೀಯ ಸಂಯೋಜಕ ಎಂ.ಎ. ರಂಗಸ್ವಾಮಿ, ರಾಜ್ಯ ಸಂಘಟಕ ಹಾಗೂ ಕರ್ನಾಟಕದ ಉಸ್ತುವಾರಿ ಪವನ್ ಗಾಂಧಿ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ನಗರಸಭಾ ಸದಸ್ಯರಾದ ಲೀಲಾ ಶೇಷಮ್ಮ, ಪ್ರಕಾಶ್ ಆಚಾರ್ಯ, ಕೆ.ಎಂ. ವೆಂಕಟೇಶ್, ಗಿಲ್ಬರ್ಟ್ ಲೋಬೋ, ಜಿಲ್ಲಾ ಪಂಚಾಯ್ತಿ ಸದಸ್ಯೆ ಸುನಿತಾ, ಸೂದನ ಈರಪ್ಪ ನಾಚಪ್ಪ, ಬಂಧೀಖಾನೆ ಸಮಿತಿ ಸದಸ್ಯರಾದ ಹನೀಫ್, ಪುಷ್ಪ ಪೂಣಚ್ಚ, ಜಿಲ್ಲಾ ಸಹ ಸಂಘಟಕಿ ಕುಮಾರಿ ಕಾವೇರಿ, ಜಿ.ಪಂ. ವ್ಯಾಪ್ತಿಯ ಸಂಘಟಕರು ಸೇರಿದಂತೆ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.