ಸುಂಟಿಕೊಪ್ಪ, ಮೇ 28: ಬ್ಲೂ ಬಾಯ್ಸ್ ಯೂತ್ ಕ್ಲಬ್ ವತಿಯಿಂದ ಜಿ.ಯಂ.ಪಿ. ಶಾಲಾ ಮೈದಾನದಲ್ಲಿ ಆಯೋಜಿತಗೊಂಡಿರುವ 21ನೇ ವರ್ಷದ ಡಿ. ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್‍ಕಪ್ ಫುಟ್ಬಾಲ್ ಫೈನಲ್ ಪಂದ್ಯಾವಳಿ ಹಾಗೂ ಸಮಾರೋಪ ಸಮಾರಂಭ ತಾ. 29 ರಂದು (ಇಂದು) ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಶ್ರೀಧರ್ ಕುಮಾರ್ ತಿಳಿಸಿದ್ದಾರೆ.
ಕಳೆದ 10 ದಿನಗಳಿಂದ ಇಲ್ಲಿನ ಜಿ.ಯಂ.ಪಿ. ಶಾಲಾ ಮೈದಾನದಲ್ಲಿ ಆಯೋಜಿತಗೊಂಡಿರುವ ಪಂದ್ಯಾವಳಿಯ ಸಮಾರೋಪ ಸಮಾರಂಭ ಹಾಗೂ ಫೈನಲ್ ಪಂದ್ಯಾವಳಿಯನ್ನು 4 ಗಂಟೆಗೆ ಕ್ರೀಡಾಕೂಟ ಆಯೋಜಕರು ಹಾಗೂ ಬಹುಮಾನ ದಾನಿ ಡಿ. ವಿನೋದ್ ಶಿವಪ್ಪ ಹಾಗೂ ಡಿ. ವಿಶಾಲ್ ಶಿವಪ್ಪ ಉದ್ಘಾಟಿಸುವರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಎ. ಮಂಜು, ಬೆಟ್ಟಗೇರಿ ಗ್ರೂಪ್ ತೋಟದ ಮಾಲೀಕ ಡಿ. ವಿನೋದ್ ಶಿವಪ್ಪ ಪಾಲ್ಗೊಳ್ಳಲಿದ್ದಾರೆ.
ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಹಾಸನ ಜಿಲ್ಲಾ ಗ್ರಾಹಕರ ವೇದಿಕೆಯ ಅಧ್ಯಕ್ಷ ಎ. ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ, ವಾಣಿಜ್ಯೋದ್ಯಮಿ ಮಿಟ್ಟು ಚಂಗಪ್ಪ, ರಾಜ್ಯ ಐಎನ್‍ಟಿಯುಸಿ ಉಪಾಧ್ಯಕ್ಷ ಎನ್. ಮುತ್ತಪ್ಪ, ಪನ್ಯ ತೋಟದ ಮಾಲೀಕ ಆನಂದ ಬಸಪ್ಪ, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್, ಟಿಂಬರ್ ವ್ಯಾಪಾರಿ ಪಿ.ಸಿ. ಹಸೈನಾರ್, ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆ ಅಧ್ಯಕ್ಷ ಮೋಹನ್ ಅಯ್ಯಪ್ಪ, ಗುಡ್ಡೆಹೊಸೂರು ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎಂ. ಲತೀಫ್, ತಾಲೂಕು ಪಂಚಾಯಿತಿ ಸದಸ್ಯೆ ವಿಮಲಾವತಿ ಸುದೀಶ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಜರ್ಮಿ ಡಿಸೋಜ, ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ಎ. ಉಸ್ಮಾನ್, ಸಿದ್ಧಲಿಂಗಪುರದ ಎ.ಎಸ್. ರಾಮಣ್ಣ, (ಕೋಟಿ), ಸುಂಟಿಕೊಪ್ಪದ ಉದ್ಯಮಿ ಪಿ.ಸಿ. ಮೋಹನ್, ಗುತ್ತಿಗೆದಾರ ಸಿ.ಬಿ. ಚಂದ್ರಶೇಖರ್ ಹಾಗೂ ವಿಶೇಷ ಆಹ್ವಾನಿತರಾಗಿ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.