ವೀರಾಜಪೇಟೆ, ಅ. 23: ಪಟ್ಟಣದ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅನನ್ಯ ಸುರೇಶ್ 19 ರ ವಯೋಮಿತಿಯ ರಾಷ್ಟ್ರಮಟ್ಟದ ಚೆಸ್ ಟೂರ್ನಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಶಾಲಾ ವಿಭಾಗದ 62ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಿದ್ದಾಳೆ. ಕಳೆದ ತಿಂಗಳು ರಾಯಚೂರಿನ ಸಿಂಧನೂರಿನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ವೀಣಾಶ್ರೀ, ಹರ್ಷಕೀರ್ತಿ ಹಾಗೂ ಅನನ್ಯ ಸುರೇಶ್ ಚೆಸ್‍ನಲ್ಲಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದರು. ಈ ಕ್ರೀಡಾಕೂಟದಲ್ಲಿ ಅನನ್ಯ ಸುರೇಶ್ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಳು.