ಮಡಿಕೇರಿ, ನ. 19: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ಡಾ. ನಂಜುಂಡೇಗೌಡ ಅವರ ಅಧ್ಯಕ್ಷತೆಯಲ್ಲಿ ‘ರಾಷ್ಟ್ರೀಯ ಐಕ್ಯತಾ ಸಪ್ತಾಹ’ ನಡೆಯಿತು.

ಮಡಿಕೇರಿ ತಹಶೀಲ್ದಾರ್ ಕುಸುಮ ಹಾಗೂ ನಾನಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪ್ರತಿಜ್ಞಾ ವಿಧಿ ಬೋಧಿಸಿದ ಉಪವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಅವರು ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆಂದು ನಾನು ಶ್ರದ್ಧಾಪೂರ್ವಕವಾಗಿ ಪ್ರಮಾಣ ಮಾಡುತ್ತೇನೆ. ಅಲ್ಲದೆ ಎಂದಿಗೂ ಹಿಂಸಾಚಾರದಲ್ಲಿ ತೊಡಗುವದಿಲ್ಲವೆಂದು ಮತ್ತು ಮತ, ಭಾಷೆ, ಪ್ರದೇಶ ಅಥವಾ ಇತರ ರಾಜಕೀಯ ಜಾತಿ, ಧರ್ಮ, ಪ್ರದೇಶ, ಭಾಷೆ, ಮತ ಮೊದಲಾದ ಯಾವದೇ ಬೇಧ ಭಾವವಿಲ್ಲದೆ ಆರ್ಥಿಕ ಕುಂದು- ಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನತ್ಮಕ ರೀತಿಯಲ್ಲಿ ಬಗೆ ಹರಿಸಿಕೊಳ್ಳುವ ದಿಸೆಯಲ್ಲಿ ಪ್ರಯತ್ನವನ್ನು ಮುಂದುವರಿಸಬೇಕಾಗಿದೆ.

ವೈಯಕ್ತಿಕವಾಗಲಿ, ಸಾಮೂಹಿಕವಾಗಲಿ ಸಮಾಜದಲ್ಲಿರುವ ಬೇಧ ಭಾವಗಳು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಮತ್ತು ಸಂವಿಧಾನಾತ್ಮಕವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮುಂದಾಗಬೇಕು ಎಂದು ಡಾ. ನಂಜುಂಡೇಗೌಡ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.