ಮಡಿಕೇರಿ, ಜ. 6: ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸುವರ್ಣ ಸಂಭ್ರಮದಲ್ಲಿದ್ದು, ತಾ. 17 ರಂದು ಸುವರ್ಣ ಮಹೋತ್ಸವದ ಸಮಾರಂಭ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಎನ್. ಪ್ರಕಾಶ್ ತಿಳಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುವರ್ಣ ಸಂಭ್ರಮದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ನಗರದ ಕಾವೇರಿ ಹಾಲ್‍ನಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಉದ್ಘಾಟಿಸಲಿದ್ದಾರೆ. ಕೇಂದ್ರÀ್ರ ಸಚಿವ ಡಿ.ವಿ. ಸದಾನಂದ ಗೌಡ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಸುವರ್ಣ ಸಂಭ್ರಮ ಆಚರಣಾ ಸಮಿತಿಯ ಅಧ್ಯಕ್ಷ ಕೆ.ಬಿ. ಗಿರೀಶ್ ಗಣಪತಿ ಹಾಗೂ ಎಫ್‍ಕೆಸಿಸಿಐ ಅಧ್ಯಕ್ಷ ಎಂ.ಸಿ. ದಿನೇಶ್ ಗೌರವ ಉಪಸ್ಥಿತರೆಂದು

(ಮೊದಲ ಪುಟದಿಂದ) ಬಿ.ಎನ್. ಪ್ರಕಾಶ್ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷ ಟಿ.ಪಿ. ರಮೇಶ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ ಹಾಗೂ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಉಪಸ್ಥಿತರಿರುವರು.

ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಾಜಿ ಅಧ್ಯಕ್ಷರುಗಳಾದ ಎನ್.ಆರ್. ಹುಸೇನ್, ಎಂ.ಪಿ. ಹಾರೂನ್, ಎಂ.ಬಿ. ದೇವಯ್ಯ, ಜಿ. ರಾಜೇಂದ್ರ ಕೆ.ಬಿ. ಗಿರೀಶ್ ಗಣಪತಿ ಹಾಗೂ ಜಿ. ಚಿದ್ವಿಲಾಸ್ ಅವರುಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವ ದೆಂದು ಬಿ.ಎಂ. ಪ್ರಕಾಶ್ ತಿಳಿಸಿದರು.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಫ್‍ಕೆಸಿಸಿಐ ಹಿರಿಯ ಉಪಾಧ್ಯಕ್ಷ ಕೆ. ರವಿ ಹಾಗೂ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಅವರ ಗೌರವ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ಕೆಎಸ್‍ಐಐಡಿಬಿ ಅಧ್ಯಕ್ಷ ಸಿ.ಎಂ. ಧನಂಜಯ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ಜಿಲ್ಲಾ ಕೈಗಾರಿಕಾ ಕೇಂದ್ರÀ್ರದ ಜಂಟಿ ನಿರ್ದೇಶಕ ಹೆಚ್. ರಾಮಕೃಷ್ಣೇಗೌಡ ಪಾಲ್ಗೊಳ್ಳಲಿದ್ದಾರೆ.

ಗೌರವ ಅತಿಥಿಗಳಾಗಿ ಮಾಜಿ ಸಂಸದ ಹೆಚ್.ವಿಶ್ವನಾಥ್, ಮಾಜಿ ಸಚಿವರುಗಳಾದ ಯಂ.ಸಿ. ನಾಣಯ್ಯ, ಬಿ.ಎ. ಜೀವಿಜಯ, ಸುಮಾ ವಸಂತ್, ಟಿ. ಜಾನ್, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಎ.ಕೆ. ಸುಬ್ಬಯ್ಯ, ಸಿ.ಎಸ್. ಅರುಣ್ ಮಾಚಯ್ಯ, ಎಸ್.ಜಿ. ಮೇದಪ್ಪ, ಕೆಜೆವಿವಿಎಸ್ ಸಂಘÀದ ಅಧ್ಯಕ್ಷರಾದ ಕೆ.ಎಂ. ಗಣೇಶ್, ಸಿಒಸಿ ಟ್ರಸ್ಟ್ ಅಧ್ಯಕ್ಷ ಬಿ.ಟಿ. ತಿಮ್ಮಶೆಟ್ಟಿ, ಕೆಡಿಸಿಸಿಐ ಪ್ರಧಾನ ಕಾರ್ಯದರ್ಶಿ ಮೋಂತಿ ಗಣೇಶ್, ಖಜಾಂಚಿ ಎ.ಎನ್. ರವಿ ಉತ್ತಪ್ಪ, ಉಪಾಧ್ಯಕ್ಷರಾದ ಎಂ.ಇ. ಹನೀಫ್, ಬಿ.ಆರ್. ನಾಗೇಂದ್ರ ಪ್ರಸಾದ್, ಸಂಘಟನಾ ಕಾರ್ಯದರ್ಶಿಗಳಾದ ಅಂಬೆಕಲ್ ನವೀನ್ ಕುಶಾಲಪ್ಪ, ಎಂ.ಪಿ. ಕೇಶವ ಕಾಮತ್ ಹಾಗೂ ಬಿ.ಆರ್. ಪ್ರಮೋದ್ ಉಪಸ್ಥಿತರಿರುವರು ಎಂದು ಬಿ.ಎನ್. ಪ್ರಕಾಶ್ ತಿಳಿಸಿದರು.

ಸುಮಾರು 3 ಸಾವಿರ ಸದಸ್ಯರನ್ನು ಹೊಂದಿರುವ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸ್ಥಾಪಕಾಧ್ಯಕ್ಷರು ಹಾಗೂ ಎಲ್ಲಾ ಹಿರಿಯರ ಪರಿಶ್ರಮದಿಂದ ಸುವರ್ಣ ಮಹೋತ್ಸವವÀನ್ನು ಆಚರಿಸುತ್ತಿದೆ ಎಂದು ಅವರು ಇದೇ ಸಂದರ್ಭ ಹರ್ಷ ವ್ಯಕ್ತಪಡಿಸಿದರು.

ಸುವರ್ಣ ಸಂಭ್ರಮ ಆಚರಣಾ ಸಮತಿಯ ಅಧ್ಯಕ್ಷ ಕೆ.ಬಿ. ಗಿರೀಶ್ ಗಣಪತಿ ಮಾತನಾಡಿ, ಸಮಾರಂಭದ ಪ್ರಯುಕ್ತ ವಿವಿಧ ಆಟೋಟಗಳ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸರ್ವರು ಪಾಲ್ಗೊಳ್ಳುವಂತೆ ಕರೆ ನೀಡಿದರು. ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮೋಂತಿ ಗಣೇಶ್, ಖಜಾಂಚಿ ಎ.ಎನ್. ರವಿ ಉತ್ತಪ್ಪ, ಉಪಾಧ್ಯಕ್ಷರುಗಳಾದ ಬಿ.ಆರ್. ನಾಗೇಂದ್ರ ಪ್ರಸಾದ್, ಎಂ.ಇ. ಹನೀಫ್, ಸಂಘಟನಾ ಕಾರ್ಯದರ್ಶಿ ಎಂ.ಪಿ. ಕೇಶವ ಕಾಮತ್ ಉಪಸ್ಥಿತರಿದ್ದರು.