ಮಡಿಕೇರಿ, ಜು. 22: ಸರಕು ಸಾಗಣೆ ವಾಹನಗಳಲ್ಲಿ ಅಧಿಕ ಭಾರ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಪ್ರಾದೇಶಿಕ ಸಾರಿಗೆ ಇಲಾಖೆ ರೂ.8.63ಲಕ್ಷ ದಂಡ ವಸೂಲಿ ಮಾಡಿದೆ.

ಕಳೆದ ಏಪ್ರಿಲ್ 1ರಿಂದ ಜೂನ್ ಅಂತ್ಯದವರೆಗೆ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಸುಮಾರು 71 ಸರಕು ಸಾಗಾಟ ವಾಹನಗಳನ್ನು ತಪಾಸಣೆ ಮಾಡಿದ್ದು, 15ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸುಮಾರು 6ವಾಹನಗಳನ್ನು ಅಧಿಕ ಭಾರದ ಸರಕುಗಳನ್ನು ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಅಧಿಕ ಭಾರದ ಸರಕುಗಳನ್ನು ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಸುಮಾರು ರೂ.4,43,050 ದಂಡ ಹಾಗೂ ರೂ.16,563 ತೆರಿಗೆಯನ್ನು ವಸೂಲಾತಿ ಮಾಡಲಾಗಿದೆ.

18 ಅಧಿಕ ಮರಳು ಸಾಗಾಟದ ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, 13 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 5 ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸುಮಾರು ರೂ.4,20,500 ದಂಡ ವಸೂಲಾತಿ ಮಾಡಲಾಗಿದೆ.

ಶಾಲಾ ವಾಹನ ತಪಾಸಣೆ

ಶಾಲಾ ವಾಹನಗಳಲ್ಲಿ ಅಧಿಕ ಮಕ್ಕಳನ್ನು ಕರೆದೊಯ್ಯಲಾಗುತ್ತಿದ್ದುದನ್ನು ಪತ್ತೆಹಚ್ಚುವ ಸಲುವಾಗಿ ಜೂನ್ ಮಾಹೆಯಲ್ಲಿ 16ಶಾಲಾ ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, ಎಲ್ಲಾ ವಹನಗಳ ವಿರುದ್ಧ ಪ್ರಕರಣ ದಾಖಲಿಸಿ ರೂ.25,600 ದಂಡ ವಿಧಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.