ಮಡಿಕೇರಿ, ನ. 30: ವಿಕಲಚೇತ ನರಲ್ಲಿ ಕ್ರೀಡೆ, ಸಾಂಸ್ಕøತಿಕ ಚಟುವಟಿಕೆ ಹೀಗೆ ವಿವಿಧ ರೀತಿಯ ಪ್ರತಿಭೆಯಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸು ವಂತಾಗಬೇಕೆಂದು ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ತಿಳಿಸಿದರು.

ಜಿಲ್ಲಾಡಳಿತ, ಜಿ.ಪಂ., ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ವಿಕಲ ಚೇತನರ ಆಟೋಟ ಮತ್ತು ಸಾಂಸ್ಕøತಿಕ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಕಲಚೇತನರು ಸಮಾಜದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಮುಂದೆ ಬರುತ್ತಿದ್ದಾರೆ. ಇವರ ಶಕ್ತಿಯನ್ನು ಸಮರ್ಪಕವಾಗಿ ಉಪಯೋಗಿಸಿ ಕೊಂಡು ಎಲ್ಲರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ನಗರಸಭೆ ಅಧ್ಯಕ್ಷೆÀ ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ ವಿಕಲಚೇತನರು ಹಿಂಜರಿಯದೆ ಧೈರ್ಯದಿಂದ ಬದುಕು ನಡೆಸುವಂತಾ ಗಬೇಕು. ಈ ನಿಟ್ಟಿನಲ್ಲಿ ವಿಕಲಚೇತನ ರಲ್ಲಿ ಸ್ಥೈರ್ಯ ತುಂಬುವಲ್ಲಿ ಪ್ರತಿಯೊಬ್ಬರು ಮುಂದಾಗಬೇಕು ಎಂದು ತಿಳಿಸಿದರು.

ವಿಕಲಚೇತನ ಸಂಘದ ಅಧ್ಯಕ್ಷ ಮಹೇಶ್ವರ ಮಾತನಾಡಿ ವಿಕಲಚೇತನರಿ ಗಾಗಿ ಇಲಾಖೆ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿದೆ. ಎಲ್ಲರೂ ಒಗ್ಗೂಡಿ ಇದರ ಸದುಪಯೋಗವನ್ನು ಪಡೆಯಬೇಕು ಎಂದು ಹೇಳಿದರು.

ತಾ.ಪಂ. ಅಧ್ಯಕ್ಷೆ ಶೋಭ ಮೋಹನ್ ಮಾತನಾಡಿ, ಎಲ್ಲಾ ಅಂಗಾಂಗ ಸರಿಯಾಗಿರುವ ವ್ಯಕ್ತಿಗಳು ಆಟೋಟಗಳಲ್ಲಿ ಪಾಲ್ಗೊಳ್ಳುವದಿಲ್ಲ. ಅಂತಹದರಲ್ಲಿ ವಿಕಲಚೇತನರು ಧೈರ್ಯ, ಆತ್ಮ ವಿಶ್ವಾಸಗಳನ್ನು ಬೆಳೆಸಿ ಕೊಂಡಲ್ಲಿ ಸಮಾಜದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ. ವಿಕಲಚೇತನರ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದ್ದು, ಅವುಗಳ ಸದುಪಯೋಗವನ್ನು ಪಡೆಯ ಬೇಕು ಎಂದು ಅವರು ಹೇಳಿದರು.

ಮೀನಾಕ್ಷಿ ಪ್ರಾರ್ಥಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ದಮಯಂತಿ ಸ್ವಾಗತಿಸಿದರು. ಶಿಶು ಕಲ್ಯಾಣ ಅಭಿವೃದ್ಧಿ ಯೋಜನಾಧಿಕಾರಿ ಸವಿತ ನಿರೂಪಿಸಿ, ವಂದಿಸಿದರು. ನಂತರ ವಿಕಲಚೇತನರು ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡರು.