ಮಡಿಕೇರಿ, ನ. 2: ನಗರದ ಶ್ರೀ ವಿಜಯ ವಿನಾಯಕ ದೇವಾಲಯದ 18ನೇ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ನಿನ್ನೆಯಿಂದಲೇ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಆರಂಭವಾಗಿ ಇಂದು ಮಹಾಪೂಜೆ, ಮಹಾಮಂಗಳಾರತಿಯೊಂದಿಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಭಕ್ತಾದಿಗಳು ಅನ್ನ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.