ಸೋಮವಾರಪೇಟೆ, ಜು. 19: ಸೋಮವಾರಪೇಟೆ ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿ ನಿಲಯಗಳಿಗೆ 2016-17ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು hಣಣಠಿ://ಞಚಿಡಿeಠಿಚಿss. ಛಿgg.gov.iಟಿ/ ನಲ್ಲಿ ಸಲ್ಲಿಸುವದು. ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದು, ಪ್ರವರ್ಗ 1, ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ, ಹಾಗೂ ಹಿಂದುಳಿದ ವರ್ಗಗಳ ಆದಾಯ ಮಿತಿ ರೂ. 1 ಲಕ್ಷಕ್ಕೆ ಇರಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23.7.2016 ಆಗಿದೆ. ವಿವರ ಹಾಗೂ ಸರಕಾರದ ಅದೇಶಕ್ಕಾಗಿ ತಿತಿತಿ.bಚಿಛಿಞತಿಚಿಡಿಜಛಿಟಚಿsses. ಞಚಿಡಿ.ಟಿiಛಿ.iಟಿನಲ್ಲಿ ನೋಡ ಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08276-284820 ಅಥವಾ ಮೊಬೈಲ್ ಸಂಖ್ಯೆ 9480818013 ನ್ನು ಸಂಪರ್ಕಿಸಬಹುದೆಂದು ಎಂದು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.