ಮಡಿಕೇರಿ, ಆ. 30: ಪಾಲಿಬೆಟ್ಟ ಸರಕಾರಿ ಪ್ರೌಢಶಾಲೆಯ 2016-17ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪುಲಿಯಂಡ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಾನಿ ಕೂತಂಡ ಬೋಜಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸಂಯಮವನ್ನು ಮೈಗೂಡಿಸಿಕೊಂಡು ಕಲಿಯುವ ವಿದ್ಯೆ ಅತ್ಯಂತ ಮಹತ್ವಪೂರ್ಣದ್ದಾಗಿರುತ್ತದೆ ಎಂದರು.ಜೀವನದಲ್ಲಿ ಅಭಿವೃದ್ಧಿಹೊಂದಲು ವಿದ್ಯಾರ್ಥಿಗಳಿಗಿಂದು ಅನೇಕ ಅವಕಾಶಗಳಿವೆ ಎಂದು ಬೋಜಮ್ಮ ಹೇಳಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬಿ.ಆರ್. ಗಾಯತ್ರಿ ವರದಿ ವಾಚಿಸಿದರು. ಸಹ ಶಿಕ್ಷಕ ಮಂಜುನಾಥ್ ಪ್ರಾಸ್ತಾವಿಕ ನುಡಿಯಾಡಿದರು. ಶಾಲೆಯ ಮುಖ್ಯ ಶಿಕ್ಷಕಿ ಕೆ.ಎನ್. ನಳಿನಿ ಸ್ವಾಗತಿಸಿ, ಸಹ ಶಿಕ್ಷಕಿ ಮಮತಾ ಕಾಮತ್ ವಂದಿಸಿದರು. ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು.