ನಾಪೋಕ್ಲು, ಜೂ. 10: ಸಮೀಪದ ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭ ತಾ. 13 ರಂದು ಬೆಳಿಗ್ಗೆ 10.30 ಗಂಟೆಗೆ ಶಾಲಾ ಆವರಣದಲ್ಲಿ ನಡೆಯಲಿದೆ. ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಎ. ಕಿಶೋರ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಭಾಂಗಣದ ಭೂಮಿಪೂಜೆಯನ್ನು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ನೆರವೇರಿಸಲಿದ್ದಾರೆ. ಶಾಲಾ ಮಹಾದ್ವಾರದ ಭೂಮಿಪೂಜೆಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ನೆರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಎಸ್. ಗಣಪತಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ತಾಲೂಕು ಪಂಚಾಯಿತಿ ಸದಸ್ಯೆ ತುಂತಜ್ಜೀರ ಕುಮುದ ರಶ್ಮಿ, ಬೆಟ್ಟಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ. ಶಾಂತಿ ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಾಂತಿ ಸೋಮಣ್ಣ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿದೆ. - ದುಗ್ಗಳ