ಸಿದ್ದಾಪುರ, ಜು. 8: ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಗುಹ್ಯ ಗ್ರಾಮದ ಗುಹ್ಯ, ಕೂಡುಗದ್ದೆ, ಕಕ್ಕಟ್ಟುಕಾಡುವಿನಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ ಉಟಾಗುತ್ತಿದೆ.

ಈ ಬಗ್ಗೆ ಹಲವಾರು ಬಾರಿ ಗ್ರಾಮಸ್ಥರು ಸೆಸ್ಕ್‍ಗೆ ಮನವಿ ಮಾಡಿದರೂ ಕೂಡ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದೆ, ಅಧಿಕಾರಿಗಳು ಬೇಜವಬ್ದಾರಿತನ ಪ್ರದರ್ಶಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗುಹ್ಯ ಗ್ರಾಮದ ವಿದ್ಯುತ್ ಸಮಸ್ಯೆಯನ್ನು ನಿವಾರಿಸಬೇಕೆಂದು ಸಿದ್ದಾಪುರ ಗ್ರಾ.ಪಂ. ಸದಸ್ಯ ರೆಜಿತ್ ಕುಮಾರ್ ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಗ್ರಾಮಸ್ಥರು ಹಾಗೂ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸುವದಾಗಿ ಎಚ್ಚರಿಸಿದ್ದಾರೆ.