ಮಡಿಕೇರಿ, ಡಿ. 8: ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮೈಸೂರು ಗ್ರೀನ್ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ಇವರ ಸಹಯೋಗದಲ್ಲಿ ಜಿಲ್ಲೆಯ ಪೆನ್‍ಶನ್ ಲೈನ್, ಪೊಲೀಸ್ ವಸತಿ ಗೃಹ ಸಂಖ್ಯೆ.12/35, ಮಡಿಕೇರಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯೋಜನಾ ಸಂಯೋಜಕರು-1 (ಸ್ನಾತಕೋತ್ತರ ಪದವಿ), ಕೌನ್ಸಿಲರ್/ಸಮಾಜ ಸೇವಕರು-2 (ಎಂ.ಎಸ್.ಡಬ್ಲ್ಯೂ) ಹಾಗೂ ಕಚೇರಿ ಸೇವಕರು, ಸ್ವಚ್ಛಗಾರರು-1 (ಎಸ್.ಎಸ್.ಎಲ್.ಸಿ.) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೆನ್‍ಶನ್ ಲೈನ್, ಪೊಲೀಸ್ ವಸತಿ ಗೃಹ ಸಂಖ್ಯೆ. 12/35, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿಂದ ಅರ್ಜಿ ಪಡೆದು ತಾ. 15 ರೊಳಗೆ ತಮ್ಮ ದಾಖಲಾತಿಯ ಪ್ರತಿಗಳನ್ನು ಇಲ್ಲಿಗೆ ಸಲ್ಲಿಸಲು ಕೋರಲಾಗಿದೆ. ಹಾಗೂ ತಾ. 16 ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲಾ ದಾಖಲಾತಿಗಳೊಂದಿಗೆ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೆನ್‍ಶನ್ ಲೈನ್, ಪೊಲೀಸ್ ವಸತಿ ಗೃಹ ಸಂಖ್ಯೆ. 12/35, ಮಡಿಕೇರಿ, ಇಲ್ಲಿಗೆ ಸಂದರ್ಶನಕ್ಕೆ ಹಾಜರಾಗಲು ಕೋರಿದೆ. ಹಾಗೂ ಹೆಚ್ಚಿನ ಮಾಹಿತಿಗೆ ಕಾರ್ಯದರ್ಶಿಗಳು, ಗ್ರೀನ್ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ದೂರವಾಣಿ ಸಂಖ್ಯೆ.9448425408, 08272-222829, 08272-22121ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

2016-17ನೇ ಸಾಲಿನಲ್ಲಿ ನಡೆದ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2016ರ ಏಪ್ರಿಲ್, 1 ರಿಂದ ಡಿ. 15 ರವರೆಗೆ ನಡೆಸಿದ ರಾಜ್ಯ, ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ಕ್ರೀಡಾ ಪ್ರಾಧಿಕಾರ, ಸ್ಕೂಲ್ ಗೇಮ್ಸ್ ಫೆಡರೇಷನ್ ಹಾಗೂ ಅಂಗೀಕೃತ ಕ್ರೀಡಾ ಫೆಡರೇಷನ್ ವತಿಯಿಂದ 2016-17ನೇ ಸಾಲಿನಲ್ಲಿ ಏರ್ಪಡಿಸಿರುವ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದ ಅರ್ಹ ಕ್ರೀಡಾಪಟುಗಳಿಗೆ ಮಾತ್ರ ಕ್ರೀಡಾ ವಿದ್ಯಾರ್ಥಿ ವೇತನ ನೀಡಲಾಗುವದು.

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನಗಳಿಸಿದವರಿಗೆ ರೂ. 2 ಸಾವಿರ ಹಾಗೂ ರಾಷ್ಟ್ರಮಟ್ಟದಲ್ಲಿ ವಿಜೇತರಾದವರಿಗೆ ರೂ. 3 ಸಾವಿರದಂತೆ ಕ್ರೀಡಾ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ತಾ. 22 ಕೊನೆಯ ದಿನವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ನಮೂನೆಗಾಗಿ ದೂರವಾಣಿ ಸಂಖ್ಯೆ: 08272-228985ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.