ಮೇಕೇರಿ: ಮೇಕೇರಿಯ ಶ್ರೀ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮೇಕೇರಿ ಗ್ರಾಮದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಕೌಶಲ್ಯ ಅಭಿವೃದ್ಧಿ ಉದ್ಯಮಶೀಲ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ, ತಾಲೂಕು ಯುವ ಒಕ್ಕೂಟ, ಸುಭಾಷ್ ಯುವ ಸಮಿತಿ, ಅಟಲ್ ಬಿಹಾರಿ ವಾಜಪೇಯಿ ಹೆಲ್ತ್‍ಲೈನ್, ರೋಟರಿ ಸಮುದಾಯ ದಳ ಹಾಗೂ ಶ್ರೀ ಸ್ವಾಗತ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಮೇಕೇರಿ ಗ್ರಾಮದಲ್ಲಿ ಗಿಡ ನೆಡುವ ಮೂಲ ಆಚರಿಸಲಾಯಿತು.

ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಸಮುದಾಯ ದಳದ ಕಾರ್ಯದರ್ಶಿ ಟಿ.ವಿ. ಲೋಕೇಶ್, ಗಿಡ-ಮರಗಳ ನಾಶದಿಂದ ಉಂಟಾಗುವ ಅನಾಹುತಗಳ ಬಗ್ಗೆ ವಿವರಿಸಿದರು. ಹವಾಗುಣದ ಸಮಾತೋಲನವನ್ನು ಕಾಯ್ದುಕೊಳ್ಳಲು ಹಸಿರ ಪರಿಸರವನ್ನು ಸಂರಕ್ಷಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೇಕೇರಿ ಶ್ರೀಗೌರಿಶಂಕರ ದೇವಾಲಯದ ಕಾರ್ಯದರ್ಶಿಯಾದ ಪಿ.ಕೆ. ವೇಲಾಯುಧ, ಪರಿಸರ ಸಂರಕ್ಷಣೆಯ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ಗಿಡ-ಮರಗಳ ರಕ್ಷಣೆ ಎಲ್ಲರ ಹೊಣೆ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸ್ವಾಗತ ಯುವಕ ಸಂಘದ ಅಧ್ಯಕ್ಷ ಜೆ. ಹರೀಶ್ ವಹಿಸಿದ್ದರು. ತಾಲೂಕು ಯುವ ಒಕ್ಕೂಟದ ಕಾರ್ಯದರ್ಶಿ ಟಿ.ಎ. ಕುಮಾರ್, ಸಂಘದ ಉಪಕಾರ್ಯದರ್ಶಿ ರಾಜೇಶ್, ಉಪಾಧ್ಯಕ್ಷ ಚಂದ್ರನ್, ಕಾರ್ಯದರ್ಶಿ ಟಿ.ಎಂ. ಶ್ರೇಯಸ್, ಖಜಾಂಚಿ ಬಿ.ಎಸ್. ಅಶೋಕ್, ಸರ್ವಸದಸ್ಯರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮೇಕೇರಿ ಗ್ರಾಮದ ದೇವಸ್ಥಾನ, ಶಾಲೆ ಹಾಗೂ ಸರ್ಕಾರಿ ಅರಣ್ಯ ಪ್ರದೇಶಗಳಲ್ಲಿ ಹಲವು ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣಗೊಳಿಸಲಾಯಿತು.