ಮೂರ್ನಾಡು, ಜೂ. 10: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕಾನೂನು ಸಾಕ್ಷರತಾ ರಥದ ಮೂಲಕ ವಿಶೇಷ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಇಲ್ಲಿನ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಸಮಾರಂಭವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಾನೂನು ಸಾಗರದಂತೆ ವಿಶಾಲವಾದುದ್ದಾಗಿದೆ. ಪ್ರತಿಯೊಬ್ಬರು ಕಾನೂನಿನ ಕುರಿತು ಅರಿವು ಮೂಡಿಸಿಕೊಳ್ಳಬೇಕು. ಸಮಾಜದಲ್ಲಿ ಉತ್ತಮ ಜೀವನ ನಡೆಸುವಲ್ಲಿ ಕಾನೂನು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಡಿಕೇರಿ ವಕೀಲ ವೈ. ಮನೋಜ್ ಬೋಪಯ್ಯ ವಿವಾಹ ಮತ್ತು ವಿಚ್ಛೇದನ ಕಾಯ್ದೆ ಹಾಗೂ ಮಕ್ಕಳ ಅಪೌಷ್ಟಿಕತೆ ತಡೆಗಟ್ಟುವಿಕೆ ವಿಷಯದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಸಂಯುಕ್ತ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಪಾರ್ವತಿ ವಹಿಸಿದರು.