ಮಡಿಕೇರಿ, ಜೂ. 11: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನ ತಾ. 30 ಆಗಿದೆ.

ಷರತ್ತುಗಳು ಇಂತಿದೆ: 5ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವದು. ವಿದ್ಯಾರ್ಥಿಗಳಿಂದ ಜಾತಿ ದೃಡಿsೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಡಿsೀಕೃತಗೊಂಡ ಅಂಕಪಟ್ಟಿಯನ್ನು ಸಲ್ಲಿಸುವದು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. 2 ಲಕ್ಷಗಳಿರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವದು). ಜಿಲ್ಲೆಗೆ ನೀಡಿದ ಗುರಿಯಂತೆ ಅರ್ಹ ವಿದ್ಯಾರ್ಥಿಗಳನ್ನು ಲಾಟರಿ ಮೂಲಕ ಜಿಲ್ಲಾಧಿಕಾರಿ ಅವರ ಸಮ್ಮುಖದಲ್ಲಿ ಆಯ್ಕೆ ಮಾಡಲಾಗುವದು. ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ ಅಂದರೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿಗೆ ಅವಕಾಶ ಕಲ್ಪಿಸುವದು. ಬಾಲಕರು ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೆ ಅವಕಾಶ ನೀಡಲಾಗುವದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ ತಿಳಿಸಿದ್ದಾರೆ.

ಅರ್ಜಿಯನ್ನು ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-08272-225531, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ 08276-281115, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ 08274-249476 ಇಲ್ಲಿ ಪಡೆಯಬಹುದಾಗಿದೆ.