ಕುಶಾಲನಗರ, ಜು. 26: ಇಲ್ಲಿಗೆ ಸಮೀಪದ ಮಾದಾಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನಂಜರಾಯಪಟ್ಟಣ ಕ್ಲಸ್ಟರ್ ವiಟ್ಟದ ಸ್ವಚ್ಛತಾ ಆಂದೋಲನ ಸ್ಪರ್ಧಾ ಕಾರ್ಯಕ್ರಮ ನಡೆಯಿತು.

ಸ್ಪರ್ಧೆಗೆ ಕ್ಲಸ್ಟರ್ ವ್ಯಾಪ್ತಿಯ 12 ಶಾಲೆಗಳಿಂದ 46 ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ ನಡೆದ ಸಮಾರಂಭದಲ್ಲಿ ಮಾತಾನಾಡಿದ ಸಿ.ಅರ್.ಪಿ. ಸತ್ಯನಾರಾಯಣ ಅವರು ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಇಂತಹ ಸ್ಪರ್ಧೆಗಳು ಬಹಳ ಅವಶ್ಯಕ ಎಂದು ಹೇಳಿದರು.

ಸಮಾರೋಪ ಸಮಾರಂಭದಲ್ಲಿ ಮಾದಾಪಟ್ಟಣ ಶಾಲೆಯ ಮುಖ್ಯ ಶಿಕ್ಷಕಿ ಕೆ.ಸಿ. ದೇವಮ್ಮ, ಗುಡ್ಡೆಹೊಸೂರು ಶಾಲೆಯ ಮುಖ್ಯ ಶಿಕ್ಷಕ ಸಣ್ಣಸ್ವಾಮಿ ಉಪಸ್ಥಿತರಿದ್ದರು. ಈ ಸಂದರ್ಭ ಮಾತನಾಡಿದ ಮೊರಾರ್ಜಿ ಶಾಲೆಯ ಚಿತ್ರಕಲಾ ಶಿಕ್ಷಕ ಸ್ವಾಮಿಯವರು ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ ಆಗತ್ಯ ಎಂದು ಹೇಳಿದರು.

ಸಹ ಶಿಕ್ಷಕರಾದ ಜಯಕಲಾ, ಮೀನಾಕ್ಷಿ, ವಿಜಯಾ, ದೈಹಿಕ ಶಿಕ್ಷಕ ಸುರೇಶ್, ರೆಮ್ಮಿ, ಆದರ್ಶ, ಅಣ್ಣಯ್ಯಚಾರಿ ಇವರುಗಳು ತೀರ್ಪುಗಾರರಾಗಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.