ಕುಶಾಲನಗರ, ಸೆ. 26: ಸರಕಾರಿ ಶಾಲೆಯ ಶಿಕ್ಷಕನೊಬ್ಬ ಪ್ರತಿ ಶಾಲೆಗಳಿಗೆ ತೆರಳಿ ಶಿಕ್ಷಕರ ನಡುವೆ ಗೊಂದಲ ಮೂಡಿಸುತ್ತಿರುವದಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷÀ ಹೆಚ್.ಎನ್. ಮಂಜುನಾಥ್ ಆರೋಪಿಸಿದ್ದಾರೆ. ತಕ್ಷಣ ಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.ಕುಶಾಲನಗರದಲ್ಲಿ ಸುದ್ದಿಗೋಷಿ ್ಠಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಹೆಚ್.ಎನ್. ಮಂಜುನಾಥ್, ನಾಪೋಕ್ಲು ಬೇತು ಸರಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಗೇಂದ್ರ ಎಂಬವರು ಇತರೆ ಶಾಲೆಗಳಿಗೆ ತೆರಳಿ ಶಿಕ್ಷಕರ ಸಂಘದ ಪದಾಧಿಕಾರಿಗಳ ಮೇಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅಧಿಕಾರಿಗಳ ಮೇಲೆ ವೃಥಾ ಆರೋಪ ಹಾಗೂ ಬೆದರಿಕೆ ತಂತ್ರ ಮಾಡುತ್ತಿರುವದಾಗಿ ಆರೋಪಿಸಿದ ಮಂಜುನಾಥ್, ತಕ್ಷಣ ಅಧಿಕಾರಿಗಳು ಈತನ ಮೇಲೆ ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ.