ಗೋಣಿಕೊಪ್ಪಲು, ಸೆ. 15: ಶಿಕ್ಷಕರ ದಿನಾಚರಣೆ ಅಂಗವಾಗಿ ಇಲ್ಲಿನ ಕಾವೇರಿ ಪದವಿಪೂರ್ವ ಕಾಲೇಜಿನ ವತಿಯಿಂದ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಅಧೀಕ್ಷಕಿ ಎನ್.ಪಿ. ಗಂಗಮ್ಮ ಅವರನ್ನು ಸನ್ಮಾನಿಸಲಾಯಿತು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಅವರು ಸ್ವಾಗತಿಸಿ, “ಗಂಗಮ್ಮ ಅವರ ನಿಸ್ವಾರ್ಥ ಸೇವಾ ಮನೋಭಾವನೆ, ಕೆಲಸದಲ್ಲಿ ಅವರಿಗಿದ್ದ ದಕ್ಷತೆ, ಸಮಾಜ ಸೇವೆಯಂತಹ ಗುಣಗಳನ್ನು ಶ್ಲಾಘಿಸಿದರು.

ಕಾವೇರಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಉಪನ್ಯಾಸಕರಿಗೆ ವಿವಿಧ ಬಗೆಯ ಕ್ರೀಡೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನವನ್ನು ನೀಡುವದರ ಮೂಲಕ ವಿದ್ಯಾರ್ಥಿಗಳು ಶಿಕ್ಷಕರಿಗೆ ನಮನ ಸಲ್ಲಿಸಿದರು.

ಹಿರಿಯ ಉಪನ್ಯಾಸಕಿ ಪದ್ಮಾವತಿ ಮಹಾವೀರ್, ವಿದ್ಯಾರ್ಥಿ ಕ್ಷೇಮಪಾಲನಾ ಸಂಘದ ಸಂಚಾಲಕಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.