ಕೂಡಿಗೆ, ಆ. 29: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೂಡಿಗೆ ಗ್ರಾ.ಪಂ.ನ ರೂ. 1 ಅನುದಾನದಲ್ಲಿ ಶೌಚಾಲಯವನ್ನು ನಿರ್ಮಿಸ ಲಾಗಿದ್ದು, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಉದ್ಘಾಟಿಸಿದರು.
ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಗನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ, ಮದಲಾಪುರ ವಾರ್ಡ್‍ನ ಸದಸ್ಯರು ಹಾಗೂ ಕಾರ್ಯದರ್ಶಿ ಸ್ವಾಮಿನಾಯಕ್, ಸಿಬ್ಬಂದಿ ಕೆ.ಸಿ. ರವಿ ಮತ್ತಿತರರು ಇದ್ದರು.