*ಸಿದ್ದಾಪುರ, ಆ. 25: ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಿದ್ದಾಪುರ ಶ್ರೀ ಕೃಷ್ಣ ವಿದ್ಯಾಮಂದಿರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯ ವೇಷ ಧÀರಿಸಿ ಪ್ರದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಶ್ರೀಕೃಷ್ಣ ದೇವರ ವಿಶೇಷ ಪೂಜೆಯನ್ನು ಶಾಲಾ ಮುಖ್ಯ ಶಿಕ್ಷಕಿ ರಶಿತಾ ರಾಜೀವನ್ ನಡೆಸಿಕೊಟ್ಟರು.