ಮಡಿಕೇರಿ, ಆ. 23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ. 25 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಾರಂಭ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ. ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಶ್ರೀಮತಿ ಬಂಗೇರ, ಗೊಲ್ಲ ಸಮಾಜದ ಜಿಲ್ಲಾಧ್ಯಕ್ಷ ಅಚೀರ. ಎಸ್. ನಾಣಯ್ಯ ಮತ್ತಿತರರು ಭಾಗವಹಿಸಲಿದ್ದಾರೆ.