ಕುಶಾಲನಗರ, ಜು. 28: ಕೊಪ್ಪ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ 6ನೇ ವರ್ಷದ ಜಯಂತಿ ಅಂಗವಾಗಿ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು.

ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ ಆಶ್ರಯದಲ್ಲಿ ಗ್ರಾಮದ ದೊಡ್ಡಮ್ಮತಾಯಿ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ನೆರವೇರಿತು. ಅರ್ಚಕ ರವಿ ನೇತೃತ್ವದಲ್ಲಿ ಬೆಳಿಗ್ಗೆ ದೇವರಿಗೆ ಅಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ ನಡೆಯಿತು. ನಂತರ ನೆರೆದಿದ್ದ ನೂರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಈ ಸಂದರ್ಭ ದೇವಾಲಯ ಸಮಿತಿ ಪದಾಧಿಕಾರಿಗಳು ಇದ್ದರು.