ಮಡಿಕೇರಿ, ಡಿ.9: ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವವನ್ನು ಅರ್ಥಪೂರ್ಣ ವಾಗಿ ಆಚರಿಸಲಾಯಿತು. ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂತ ಮೈಕಲರ ದೇವಾಲಯ ಧರ್ಮಗುರು ಫಾ. ಆಲ್ಪ್ರೆಡ್ ಜಾನ್ ಮೆಂಡೋನ್ಸಾ, ಶತಮಾನದ ಭವ್ಯ ಇತಿಹಾಸವನ್ನು ಹೊಂದಿರುವ ಸಂತ ಜೋಸೆಫರ ವಿದ್ಯಾಸಂಸ್ಥೆ ಉತ್ತಮ ಫಲಿತಾಂಶ ದೊಂದಿಗೆ ಗುಣಮಟ್ಟದ ಮತ್ತು ಮೌಲ್ಯಾಧರಿತ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ. ದೈಹಿಕ, ಮಾನಸಿಕ ಮತ್ತು ಹೃದಯಸ್ಪರ್ಶಿ ಬೆಳವಣಿಗೆಗೆ ವಿದ್ಯಾಸಂಸ್ಥೆ ದುಡಿಯುತ್ತಿದೆ. ಸಮಾನತೆ, ಸಹೋದರತೆ ಮತ್ತು ಮಾನವೀಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತಿದೆ. ಪ್ರಸ್ತುತ ವಿದ್ಯಾಸಂಸ್ಥೆಯಲ್ಲಿ ಸುಮಾರು 3000 ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿದ್ದು, ಮಕ್ಕಳನ್ನು ಸತ್ಪ್ರಜೆಯಾಗಿ ರೂಪಿಸಲು ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂತ ಜೋಸೆಫರ ಕನ್ಯಾಭಗಿನಿಯರ ಸಂಸ್ಥೆಯ ಮೈಸೂರು ಪ್ರಾಂತ್ಯಾಧಿಕಾರಿಗಳಾದ ಸಿ.ಜೂಲಿಯಾನ ಡಿಸೋಜ, ಮಡಿಕೇರಿಯ ಸಂತ ಜೋಸೆಫರ ವಿದ್ಯಾಸಂಸ್ಥೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ಉತ್ತಮ ಫಲಿತಾಂಶವನ್ನು ಪಡೆಯುತ್ತಿರುವದು ಉತ್ತಮ ಬೆಳವಣಿಗೆ. ವಿದ್ಯಾರ್ಥಿಗಳ ಜೀವನದಲ್ಲಿ ಮನೆಯಲ್ಲಿ ಪೋಷಕರು ಮತ್ತು ಶಾಲೆಯಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಆದ್ದರಿಂದ ಪೋಷಕರು ಎಷ್ಟೇ ಒತ್ತಡವಿದ್ದರೂ ವಿದ್ಯಾರ್ಥಿಗಳೊಂದಿಗೆ ತಮ್ಮ ಸಮಯವನ್ನು ಕಳೆಯಬೇಕು ಎಂದು ಕರೆ ನೀಡಿದರಲ್ಲದೆ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕೆಂದರು.
ಇದೇ ಸಂದರ್ಭ ವಿದ್ಯಾಸಂಸ್ಥೆ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸ ಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ವೈವಿಧÀ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ರಂಜಿಸಿದವು.
ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಬೊಮ್ಮೇಗೌಡ, ಸಿ. ಮರಿಯಾ ಗೊರೆಟ್ಟಿ, ಸಿ. ಅರುಳಮ್ಮ, ಸಿ. ಲೀಮಾ, ಸಿ. ಶೋಭ, ಸಿ. ಅಂತೋಣಿಯಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.