ಮಡಿಕೇರಿ, ಜ. 21: ಸಂಪಾಜೆ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಜರುಗಿತು. ಧ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಸಂಪಾಜೆ ಎಜ್ಯುಕೇಶನ್ ಸೊಸೈಟಿಯ ನಿಕಟಪೂರ್ವ ಅಧ್ಯಕ್ಷ ಎನ್.ಎಸ್. ದೇವಿಪ್ರಸಾದ್ ಮಾತನಾಡಿ, ಸಂಸ್ಥೆ ಬಹಳ ವರ್ಷಗಳಿಂದಲೂ ಸಾವಿರಾರು ಮಂದಿಗೆ ವಿದ್ಯೆಯನ್ನು ನೀಡಿದೆ. ಇಲ್ಲಿಂದ ವಿದ್ಯೆಯನ್ನು ಪಡೆದ ಅನೇಕ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಮುಂದೆಯೂ ಕೂಡ ನಮ್ಮ ಸಂಸ್ಥೆಯಲ್ಲಿ ಓದುವ ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ದೇಶದ ಅಭಿವೃದ್ಧಿಗೆ ಮಹತ್ತರವಾದ ಕೊಡುಗೆ ನೀಡಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬೊಮ್ಮೆಗೌಡ ಮಾತನಾಡಿ, ಬದಲಾದ ವ್ಯವಸ್ಥೆಗೆ ಅನುಗುಣವಾಗಿ ಶಿಕ್ಷಣವನ್ನು ನೀಡಬೇಕಾಗಿದೆ. ಈ ಉದ್ದೇಶದಿಂದ ಶಿಕ್ಷಣ ಕ್ರಮದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿವೆ. ಈ ಪರಿವರ್ತನೆಗೆ ಪ್ರತಿಯೊಬ್ಬರೂ ಹೊಂದಿಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣಾ ಭಿವೃದ್ಧಿಗೆ ಸರ್ಕಾರ, ಪೆÇೀಷಕರು, ಶಿಕ್ಷಕರು ಕಾರ್ಯಪ್ರವೃತ್ತರಾಗ ಬೇಕಾಗಿದೆ ಎಂದು ಹೇಳಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಪಾಜೆ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ರಾಜಾರಾಮ್ ಮಾತನಾಡಿ, ವಿದ್ಯಾರ್ಥಿಗಳು ಬಹಳ ಮುಖ್ಯವಾಗಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳ ಬೇಕಾಗಿದೆ. ಪ್ರಸ್ತುತ ಸಮಾಜಕ್ಕೆ ಮೌಲ್ಯಗಳ ಅವಶ್ಯಕತೆ ಇದೆ ಎಂದು ಹೇಳಿದರು. ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಧವ ಪೆÇಯ್ಯಮಜಲು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಎನ್.ಡಿ. ದೇವಿಚರಣ್, ಸಂಚಾಲಕ ಎಂ. ಶಂಕರನಾರಾಯಣ ಭಟ್, ನಿಕಟಪೂರ್ವ ಸಂಚಾಲಕ ನಾರಾಯಣ ಭಟ್, ಸಂಸ್ಥೆಯ ನಿರ್ದೇಶಕರುಗಳಾದ ಸುಬ್ರಮಣ್ಯ ಉಪಾಧ್ಯಾಯ, ಮುರಳೀಧರ್, ಪದ್ಮಯ್ಯಗೌಡ, ಎನ್.ವಿ. ಕೃಷ್ಣಪ್ಪ, ಪುರುಷೋತ್ತಮ ಬಾಳೆಹಿತ್ಲು, ಮಾಯಿಲಪ್ಪ, ಜಗದೀಶ್ ರೈ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಜರುಗಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ವೈ.ಕೆ. ಮಾಲತಿ ವರದಿ ವಾಚಿಸಿದರು.
ಮುಖ್ಯ ಶಿಕ್ಷಕ ಐತ್ತಪ್ಪ ಸ್ವಾಗತಿಸಿ, ಕಾಲೇಜಿನ ಉಪನ್ಯಾಸಕ ಲೋಕ್ಯಾನಾಯಕ್ ಸಭಾ ಕಾರ್ಯಕ್ರಮ ನಿರೂಪಿಸಿ, ಪ್ರೌಢಶಾಲಾ ಸಹ ಶಿಕ್ಷಕ ಹೆಚ್.ಜಿ. ಕುಮಾರ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಯೋಜಿಸಿ, ನಿರೂಪಿಸಿದರು.