ಮಡಿಕೇರಿ, ಸೆ. 13: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಗು, ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಮತ್ತು ಸಂಪಾಜೆ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಜರುಗಿದ ಜಿಲ್ಲಾ ಮಟ್ಟದ ಕವಿಗೋಷ್ಠಿ ಮತ್ತು ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಉದ್ಘಾಟಿಸಿದರು.ಕನ್ನಡ ಭಾಷೆ ಬಹಳಷ್ಟು ಪ್ರಾಚೀನ ಭಾಷೆಯಾಗಿದ್ದು, ಸುಮಾರು ಎರಡು ಸಾವಿರ ವರ್ಷಗಳ ಐತಿಹಾಸವಿದೆ. ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರಕಿರುವದು ಹೆಮ್ಮೆಯ ವಿಚಾರವಾಗಿದೆ ಎಂದು ಹರೀಶ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶಗಳ ಕಾರ್ಯಕ್ರಮ ಮಾಡುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್.ಎಸ್. ದೇವಿಪ್ರಸಾದ್ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಗು ಇದರ ನಿರ್ದೇಶಕ ಎಲ್.ಎನ್. ಕುಳ್ಳಯ್ಯನವರು ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಭಾಷೆಯನ್ನು ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್‍ಗೆ ಸಹಕಾರ ನೀಡಲಿದೆ ಎಂದು ಹೇಳಿದರು. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಂಪಾಜೆ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಹೆಚ್.ಜಿ. ಕುಮಾರ್ ವಹಿಸಿದ್ದರು. ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಚಂದ್ರ ಕಳಗಿ, ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಧವ ಪೆÇಯ್ಯಮಜಲು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಡೆಕಲ್ ಸಂತೋಷ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್, ಸಂಪಾಜೆ ಎಜ್ಯುಕೇಷನ್ ಸೊಸೈಟಿಯ ಸಂಚಾಲಕ ಕೆ.ಎಸ್. ನಾರಾಯಣ್ ಭಟ್, ಪ್ರಾಂಶುಪಾಲೆ ಮಾಲತಿ, ಮುಖ್ಯ ಶಿಕ್ಷಕ ಐತಪ್ಪ ಮಾತನಾಡಿದರು. ನಿವೃತ್ತ ಶಿಕ್ಷಕ ಜಿ. ಬುದ್ಧನಾಯ್ಕ ಹಿರಿಯ ಸಾಹಿತಿ ಟಿ.ಕೆ. ಗೋಪಾಲಕೃಷ್ಣಭಟ್ ಅವರನ್ನು ಸನ್ಮಾನಿಸಲಾಯಿತು.

ಸಂಪಾಜೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಚ್.ಜಿ. ಕುಮಾರ್ ಸ್ವಾಗತಿಸಿ, ಸಂಪಾಜೆ ಹೋಬಳಿ ಕ.ಸಾ.ಪ.ದ ಗೌರವ ಕಾರ್ಯದರ್ಶಿ ಕುಮಾರ್ ಚಿದ್ಕಾರ್ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕರಾದ ದೇವಿಚರಣ್ ವಂದಿಸಿದರು.