ಮಡಿಕೇರಿ, ನ. 26: ಭೂಮಿ ಇದೆ, ಸಂಪನ್ಮೂಲವಿದೆ. ಆದರೆ ಬುಡುಕಟ್ಟು ಜನರಿಗೆ ಸ್ವಾತಂತ್ರ್ಯ ಬಂದಿದೆಯೇ ಎಂಬದು ತಿಳಿದಿಲ್ಲ..., ಇತ್ತೀಚೆಗೆ ನಾಗರಹೊಳೆ ಹಾಡಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂಡುಬಂದ ಚಿತ್ರಣವಿದು ಎಂದು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ನುಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಲಾಗಿದ್ದ ‘ಸಂವಿಧಾನ’ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅಧಿಕಾರಿಗಳು ಸಂವಿಧಾನದ ಆಶಯಗಳನ್ನು ಅರ್ಥಮಾಡಿಕೊಂಡು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಬಡವರಿಗೆ, ಮುಖ್ಯವಾಹಿನಿಯಿಂದ ದೂರವಿರುವವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.’

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲರಾದ ಕೆ.ಆರ್. ವಿದ್ಯಾಧರ ಮಾತನಾಡಿ, ಭಾರತದಲ್ಲಿನ ಪ್ರತಿಯೊಬ್ಬರಿಗೂ ಸಂವಿಧಾನವೇ ಶ್ರೇಷ್ಠ ಧರ್ಮ ಗ್ರಂಥವಾಗಿದೆ ಎಂದರು. ಪ್ರಮಾಣ ವಚನವನ್ನು ಕೆ.ವಿ.ಸುರೇಶ್ ಬೋಧಿಸಿದರು, ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಜಿ.ಪಂ. ಉಪ ಕಾರ್ಯದರ್ಶಿ ವಿಶ್ವನಾಥ್ ಪೂಜಾರಿ ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.