ನಾಪೆÇೀಕ್ಲು, ನ. 14: ಸಾರ್ವಜನಿಕ ಕಾರ್ಯಕ್ರಮವಾದ ಟಿಪ್ಪು ಜಯಂತಿ ಸಂದರ್ಭ ರಾಜ್ಯದ ಕಾರ್ಯಕ್ರಮದ ಬಗ್ಗೆ ಚಿಂತನೆ ನಡೆಸದೆ ಅಶ್ಲೀಲ ಚಿತ್ರ ವೀಕ್ಷಣೆಯಲ್ಲಿ ತೊಡಗಿದ್ದ ರಾಜ್ಯ ಸಚಿವ ಸಂಪುಟದ ಅದರಲ್ಲೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮತ್ತು ಅಲ್ಪ ಸಂಖ್ಯಾಂತ ಘಟಕದ ಮಂತ್ರಿಯಾದ ತನ್ವೀರ್ ಸೇಠ್ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ನಾಪೆÉÇೀಕ್ಲು ನಗರದಲ್ಲಿ ಬಿ.ಜೆ.ಪಿ. ಸ್ಥಾನೀಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಕೆ.ಮರುಳಿಧರ್. ಸ್ಥಾನೀಯ ಸಮಿತಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ , ಕುಂಡ್ಯೋಳಂಡ ರಮೇಶ್ ಮುದ್ದಯ್ಯ , ಪಾಡಿಯಮ್ಮಂಡ ಮನು ಮಹೇಶ್, ಶಿವಚಾಳಿಯಂಡ ಜಗದೀಶ್ , ಕೇಟೋಳಿರ ಡಾಲಿ ಅಚ್ಚಪ್ಪ, ಅರೆಯಡ ಅಶೋಕ್ , ಚೋಕಿರ ಪ್ರಭು ಮತ್ತಿತರರಿದ್ದರು.