ಮಡಿಕೇರಿ, ಆ. 10: ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ತಾ. 15 ಮತ್ತು 16 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ತಾ. 15 ರಂದು ಬೆಳಿಗ್ಗೆ 8.45 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ 12.45 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಲಿದ್ದಾರೆ, ನಂತರ ಮಧ್ಯಾಹ್ನ 2.30 ಗಂಟೆಗೆ ನಗರದಲ್ಲಿರುವ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಲಿದ್ದಾರೆ.
ತಾ. 16 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐ.ಟಿ.ಡಿ.ಪಿ. ಇಲಾಖೆ ವತಿಯಿಂದ ಎರವ ಮತ್ತು ಸೋಲಿಗ ಜನಾಂಗದ ಫಲಾನುಭವಿಗಳಿಗೆ ಟಾಟಾ ಐಸ್ ಗೂಡ್ಸ್ ವಾಹನ ವಿತರಣಾ ಕಾರ್ಯಕ್ರಮ ಹಾಗೂ 10.45 ಗಂಟೆಗೆ ಅರಣ್ಯ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ವೀರಾಜಪೇಟೆ ತಾಲೂಕು ಸಂತ ಅನ್ನಮ್ಮ ದೇವಾಲಯದ ಚರ್ಚ್ ಜೀರ್ಣೊದ್ಧಾರ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವದು. ನಂತರ ಮಧ್ಯಾಹ್ನ 2 ಗಂಟೆಗೆ ವೀರಾಜಪೇಟೆ ತಾಲೂಕಿನ ಶ್ರೀಮಂಗಲ ಮತ್ತು ಹುದಿಕೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವದು. ಮಧ್ಯಾಹ್ನ 3 ಗಂಟೆಗೆ ನಿಟ್ಟೂರು ಕಾರ್ಮಾಡು ಗ್ರಾಮದಲ್ಲಿ ನಿಟ್ಟೂರು ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.