ಕುಶಾಲನಗರ, ಸೆ. 15: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಮಾಜದಲ್ಲಿ ಪ್ರತಿಯೊಬ್ಬರ ಮೂಲಕ ಶಾಂತಿಯ ತರಂಗಗಳನ್ನು ಬಿತ್ತರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಬಿ.ಕೆ. ಗಾಯತ್ರಿ ತಿಳಿಸಿದ್ದಾರೆ.
ಕುಶಾಲನಗರದ ಡಾ. ರಾಧಾಕೃಷ್ಣ ಬಡಾವಣೆಯಲ್ಲಿ ವಿಶ್ವವಿದ್ಯಾಲಯದ 16ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾರಂಭದ ಉದ್ಘಾಟನೆ ನೆರವೇರಿಸಿದ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮಾತನಾಡಿ, ದಿನನಿತ್ಯ ಜಂಜಾಟದಲ್ಲಿ ತೊಡಗಿರುವ ಜನರು ಶಾಂತಿ, ನೆಮ್ಮದಿ ಕಳೆದುಕೊಳ್ಳುವ ಪರಿಸ್ಥಿತಿ ಸೃಷ್ಠಿಯಾಗುತ್ತಿರುವದು ಆತಂಕಕಾರಿ ಬೆಳವಣಿಗೆ ಎಂದರು.
ಈ ಸಂದರ್ಭ ಸಂಸ್ಥೆಯ ಮಡಿಕೇರಿಯ ಬಿ.ಕೆ. ಧನಲಕ್ಷ್ಮಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಒದಗಿಸಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಎಸ್. ಮೂರ್ತಿ ಶುಭಾಶಯ ಕೋರಿದರು. ಸಂಸ್ಥೆಯ ಸ್ಥಳೀಯ ಪ್ರಮುಖರಾದ ಬಿ.ಕೆ. ನಾಗರತ್ನ ಮತ್ತು ಕಾರ್ಯಕರ್ತರು ಇದ್ದರು.