ನಾಪೆÇೀಕ್ಲು, ಜ. 1: ಸರಕಾರದ ಕೆಲಸವನ್ನು ಸಂಘ-ಸಂಸ್ಥೆಗಳು ಮಾಡುತ್ತಿವೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು.
ಸ್ಥಳೀಯ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಾಪೆÇೀಕ್ಲು ಡೆಕ್ಕನ್ ಯೂತ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಪ್ರತಿಭೆಗಳು ಹೊರ ಹೊಮ್ಮಲು ಸಾಧ್ಯವಾಗಿದೆ. ಸಂಘ-ಸಂಸ್ಥೆಗಳಿಂದ ಸರಕಾರದ ಸವಲತ್ತುಗಳು ನಗರದಲ್ಲಿ ಮಾತ್ರ ಕೇಂದ್ರೀಕೃತವಾಗಿವೆ. ಗ್ರಾಮಾಂತರ ಪ್ರದೇಶದಲ್ಲಿಯೂ ಕ್ರೀಡೆಯನ್ನು ಪೆÇ್ರೀತ್ಸಾಹಿಸುವ ಕೆಲಸವಾಗಬೇಕು ಎಂದರು.
ಪಂದ್ಯಾಟ ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿ, ಹೊಸ ವರ್ಷದ ಸಂಭ್ರಮಾಚರಣೆಯನ್ನು ಕ್ರೀಡೆಯ ಮೂಲಕ ಆಚರಿಸುತ್ತಿರುವದು ಸಂತಸ ತಂದಿದೆ. ಇಂತಹ ಕ್ರೀಡಾ ಕೂಟಗಳು ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಿದೆ ಎಂದರು.
ಸಮಾರಂಭದಲ್ಲಿ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಸದಸ್ಯರಾದ ಪಿ.ಎಂ.ರಷೀದ್, ಅಜೀಜ್, ಖುರೈಶಿ, ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಅಬೂಬಕ್ಕರ್ ಮತ್ತಿತರರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಎ.ಮನ್ಸೂರ್ ಅಲಿ ವಹಿಸಿದ್ದರು. ಪಂದ್ಯದ ವೀಕ್ಷಕ ವಿವರಣೆಯನ್ನು ಸಿ.ಎಂ.ಉಸ್ಮಾನ್ ನೆರವೇರಿಸಿದರು.
20 ತಂಡಗಳು ಭಾಗವಹಿಸಿದ್ದ ಪಂದ್ಯಾಟದಲ್ಲಿ ಕಬಡಕೇರಿ ಫ್ರೆಂಡ್ಸ್ ಕಬಡಕೇರಿ ವಿನ್ನರ್ಸ್ ಪ್ರಶಸ್ತಿ ಪಡೆದರೆ, ಕರಿಕೆ ತಂಡ ರನ್ನರ್ಸ್ ಪ್ರಶಸ್ತಿ ಪಡೆದರು.