ಮಡಿಕೇರಿ, ಮೇ 28: ತಾಲೂಕು ಸವಿತಾ ಸಮಾಜದ ವತಿಯಿಂದ ವಾರ್ಷಿಕ ಸಮ್ಮೇಳನ ತಾ. 31 ರಂದು ನಗರದ ಮೇಲಿನ ಗೌಡ ಸಮಾಜದಲ್ಲಿ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಪ್ರಮುಖರು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಬೆಳಿಗ್ಗೆ 10.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್, ರಾಜ್ಯ ಸವಿತಾ ಸಮಾಜದ ಅಧ್ಯಕ್ಷ ಸಂಪತ್ ಕುಮಾರ್, ಚಲನಚಿತ್ರ ನಟ ಮುತ್ತುರಾಜು, ಸವಿತಾ ಸಮಾಜದ ಮೈಸೂರು ಜಿಲ್ಲಾಧ್ಯಕ್ಷ ನಾಗರಾಜು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಗುವದಲ್ಲದೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನೂ ನೀಡಲಾಗುವದು. ಸಮಾಜದ ಬಂಧುಗಳಿಗಾಗಿ ಒಳಾಂಗಣ ಕ್ರೀಡಾಕೂಟವನ್ನು ಕೂಡ ಆಯೋಜಿಸಲಾಗಿದ್ದು, ಮಧ್ಯಾಹ್ನ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬೇಕಾದ ಮೊ.ಸಂಖ್ಯೆ 9986320347, 9632408444.
ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಅವಿನಾಶ್, ಖಜಾಂಚಿ ಸುಗುಣ, ಸಹ ಕಾರ್ಯದರ್ಶಿ ಮಧು ಹಾಗೂ ಸದಸ್ಯರಾದ ಸಂದೀಪ್ ಕುಮಾರ್ ಉಪಸ್ಥಿತರಿದ್ದರು.