ಮೂರ್ನಾಡು, ಜು. 12: ಕಳಂಕ ರಹಿತ ದಕ್ಷ ಅಧಿಕಾರಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಹಾಗೂ ಸಚಿವ ಜಾರ್ಜ್ ಸೇರಿದಂತೆ ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮೂರ್ನಾಡು ಕೊಡವ ಸಮಾಜದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಇಲ್ಲಿನ ಕೊಡವ ಸಮಾಜದಲ್ಲಿ ನಡೆದ ಸಭೆಯಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಮೂಡೇರ ಅಶೋಕ್ ಅಯ್ಯಪ್ಪ ಮಾತನಾಡಿ ಸಚಿವ ಜಾರ್ಜ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಅವರ ಕಿರುಕುಳ ನೀಡುತ್ತಿದ್ದ ಕುರಿತು ಡಿವೈಎಸ್‍ಪಿ ಗಣಪತಿ ಬಹಿರಂಗವಾಗಿ ಪ್ರಸ್ತಾಪ ಮಾಡಿಕೊಂಡಿದ್ದಾರೆ. ಇದರ ಆಧಾರದ ಮೇಲೆ ಕೂಡಲೇ ಜಾರ್ಜ್ ಅವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ಇನ್ನಿಬ್ಬರು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ತನಿಖೆಯ ಹೊಣೆಯನ್ನು ರಾಜ್ಯ ಸರ್ಕಾರದ ಕೈಕೆಳಗೆ ಇರುವ ಸಿಐಡಿಗೆ ಒಪ್ಪಿಸುವ ಮೂಲಕ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗಿದೆ. ಈ ಸರ್ಕಾರದ ಮೇಲೆ ಯಾವದೇ ವಿಶ್ವಾಸವಿಲ್ಲದೆ ಇದ್ದು ನ್ಯಾಯ ದೊರಕುವದು ಕಷ್ಟ. ಈ ಹಿನ್ನಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಬೇಕು ಎಂದು ಆಗ್ರಹಿಸಿದರು. ಸಭೆಯಲ್ಲಿ ಕೊಡವ ಸಮಾಜದ ಕಾರ್ಯದರ್ಶಿ ನೆರವಂಡ ಸಂಜಯ್ ಹಾಗೂ ಇನ್ನಿತರÀರು ಪಾಲ್ಗೊಂಡಿದ್ದರು.