ಬೆಂಗಳೂರು, ಸೆ. 13: ಕಾವೇರಿ ನೀರು ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಪಾಲಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಕಾವೇರಿ ವಿವಾದ ಸಂಬಂಧ ಇಂದು ಸಚಿವ ಸಂಪುಟದ ತುರ್ತು ಸಭೆ ನಡೆಸಿದ ಬಳಿಕ ಸುದ್ದಿ ಗೋಷ್ಠಿಯಲ್ಲಿ ಅವರು ಮಾತ ನಾಡಿದರು. ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಪರಸ್ಪರ ಪೂರಕವಾಗಿ ಕೆಲಸ ಮಾಡಬೇಕಿದೆ. ನ್ಯಾಯಾಲಯದ ಆದೇಶ ಪಾಲನೆ ಕಷ್ಟಕರವಾದರೂ ಕೂಡ ಸಂವಿಧಾನಾತ್ಮಕ ಸರ್ಕಾರ ವಾಗಿರುವದರಿಂದ ನ್ಯಾಯಾಲಯದ ಆದೇಶ ಉಲ್ಲಂಘಿಸುವದು ಸಂವಿಧಾನ ಬಾಹಿರವಾಗುತ್ತದೆ. ಆದ್ದರಿಂದ ಸಭೆಯಲ್ಲಿ ಸಾಧಕ - ಬಾಧಕಗಳ ಬಗ್ಗೆ ದೀರ್ಘವಾಗಿ ಚರ್ಚಿಸಲಾಗಿದೆ. ಕಾನೂನಾತ್ಮಕವಾಗಿಯೂ, ರಾಜಕೀಯವಾಗಿಯೂ ಚರ್ಚಿಸ ಲಾಗಿದೆ. ನೀರು ಬಿಡುಗಡೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯ ಮಂತ್ರಿ ಹೇಳಿದರು.

ಗೋಷ್ಠಿಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ಕಾನೂನು ಸಚಿವ ಟಿ.ಬಿ. ಜಯಚಂದ್ರ, ಗೃಹ ಸಚಿವ ಜಿ. ಪರಮೇಶ್ವರ್ ಇದ್ದರು.