ಮಡಿಕೇರಿ, ಆ. 16: ಕೊಡಗು ಗೌಡ ಯುವ ವೇದಿಕೆ ವತಿಯಿಂದ ಗೌಡ ಜನಾಂಗ ಬಾಂಧವರಿಗಾಗಿ ಸೆ.25ರಂದು ಕೊಡಗಿನ ಸಾಂಪ್ರದಾಯಿಕ ಹಬ್ಬವಾದ ಕೈಲ್ ಮುಹೂರ್ತ ಹಬ್ಬದ ಸಂತೋಷ ಕೂಟ ಏರ್ಪಡಿಸಲಾಗಿದೆ.

ಯುವ ವೇದಿಕೆ ಅಧ್ಯಕ್ಷ ಪೈಕೆರ ಮನೋಹರ್ ಮಾದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಕೈಲ್ ಮುಹೂರ್ತ ಸಂತೋಷ ಕೂಟ ಏರ್ಪಡಿಸುವ ಬಗ್ಗೆ ಬಗ್ಗೆ ತೀರ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜನಾಂಗ ಬಾಂಧವರಿಗಾಗಿ ವಿವಿಧ ಮನರಂಜನಾ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸುವ ಬಗ್ಗೆ ಚರ್ಚಿಸಲಾಯಿತು. ವಿಭಿನ್ನ ರೀತಿಯ ಕಾರ್ಯಕ್ರಮಗಳೊಂದಿಗೆ ಜನಾಂಗದ ಸಂಸ್ಕøತಿಯನ್ನು ಬಿಂಬಿಸುವ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಕೂಡ ಆಯೋಜಿಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಕಾರ್ಯದರ್ಶಿ ಕಟ್ಟೆಮನೆ ರೋಶನ್, ಉಪಾಧ್ಯಕ್ಷರುಗಳಾದ ಪಾಣತ್ತಲೆ ಜಗದೀಶ್ ಮಂದಪ್ಪ, ಬಾಳಾಡಿ ಮನೋಜ್, ಖಜಾಂಚಿ ನೆಯ್ಯಣಿ ಸಂಜು, ಸಹ ಕಾರ್ಯದರ್ಶಿ ಪೂಜಾರಿರ ಸುಮನ್ ರಮೇಶ್, ಆಹಾರ ಸಮಿತಿ ಅಧ್ಯಕ್ಷ ಪರಿಚನ ಸತೀಶ್ ತಿಮ್ಮಯ್ಯ, ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಕುಕ್ಕೆರ ಲಕ್ಷ್ಮಣ, ವೇದಿಕೆ ಸಮಿತಿಯ ಪುದಿಯನೆರವನ ರಿಶಿತ್ ಮಾದಯ್ಯ, ಹಾಗೂ ನಿರ್ದೇಶಕರುಗಳು ಪಾಲ್ಗೊಂಡಿದ್ದರು.