ಸೋಮವಾರಪೇಟೆ, ಜು. 16: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜೇಸೀ ಸಂಸ್ಥೆ, ರೋಟರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಮೀಪದ ಬೇಳೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವನ ಮಹೋತ್ಸವವನ್ನು ಆಚರಿಸಲಾಯಿತು.

ನಂತರ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಭರತ್ ಭೀಮಯ್ಯ ವಹಿಸಿದ್ದರು. ಯೋಜನೆಯ ಮೇಲ್ವಿಚಾರಕ ನಾಗರಾಜ್, ಸೇವಾ ಪ್ರತಿನಿಧಿ ರುಬೀನಾ, ಜೇಸೀರೇಟ್ಸ್ ಅಧ್ಯಕ್ಷೆ ಜ್ಯೋತಿ ರಾಜೇಶ್, ರೋಟರಿ ಕಾರ್ಯದರ್ಶಿ ಕೆ.ವಿ. ಹೆಬ್ಬಾರ್ ಸೇರಿದಂತೆ ಕರ್ಕಳ್ಳಿ ಒಕ್ಕೂಟದ ಸದಸ್ಯರುಗಳು ಉಪಸ್ಥಿತರಿದ್ದರು.

ನೇರುಗಳಲೆಯಲ್ಲಿ: ಸಮೀಪದ ಅಬ್ಬೂರುಕಟ್ಟೆಯ ನೇರುಗಳಲೆ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ವನಮಹೋತ್ಸವ ಆಚರಿಸಲಾಯಿತು. ಶಾಲೆಯಲ್ಲಿ ಕೈತೋಟ ಮಾಡುವ ಉದ್ದೇಶದಿಂದ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಶೈಲಾ, ಶಾಲಾ ಮುಖ್ಯೋಪಾಧ್ಯಾಯಿನಿ ತಂಗಮ್ಮ ಸೇರಿದಂತೆ ಇತರರು ಭಾಗವಹಿಸಿದ್ದರು.