ಸೋಮವಾರಪೇಟೆ, ಆ. 18: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಲ್ಲಿನ ಜೂನಿಯರ್ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ 70ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮೂವರು ಸಾಧಕರನ್ನು ಸನ್ಮಾನಿಸಲಾಯಿತು.
ಮಾಜಿ ಸೈನಿಕ ಜಾನ್ ವಿಲಿಯಂ ಮೆನೇಜಸ್, ಕೊಡ್ಲಿಪೇಟೆ ಹೆಮ್ಮನೆ ಗ್ರಾಮದ ಅಂಧ ಜಾನಪದ ಕಲಾವಿದ ಹೆಚ್.ಎಂ. ರುದ್ರಪ್ಪ ಹಾಗೂ ಸೋಮವಾರಪೇಟೆ ತಾಲೂಕು ತಹಶೀಲ್ದಾರ್‍ರಾಗಿ ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ನಿವೃತ್ತಿಯ ಹೊಸ್ತಿಲಲ್ಲಿರುವ ಬಿ.ಸಿ. ಶಿವಪ್ಪ ಅವರುಗಳನ್ನು ಅತಿಥಿಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರು ಸನ್ಮಾನಿಸಿದರು. ಈ ಸಂದರ್ಭ ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾ.ಪಂ. ಸದಸ್ಯೆ ತಂಗಮ್ಮ, ಸಬಿತಾ ಚೆನ್ನಕೇಶವ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಚಂದ್ರಶೇರ್, ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಚೌಡ್ಲು ಗ್ರಾ.ಪಂ. ಅಧ್ಯಕ್ಷೆ ವನಜ ಸೇರಿದಂತೆ ಇತರರು ಉಪಸ್ಥಿತರಿದ್ದು ಸನ್ಮಾನಿಸಿದರು.