ಸೋಮವಾರಪೇಟೆ, ಸೆ. 24: ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸೋಮವಾರಪೇಟೆಯಲ್ಲಿ ತಾ. 25 ರಂದು (ಇಂದು) ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ದ.ಸಂ.ಸ.ದಿಂದ: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲೂಕಿನ ಪ್ರತಿಭಾವಂತ ದಲಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ 11.30 ಗಂಟೆಗೆ ನಡೆಯಲಿದೆ

ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಇಂಜಿನಿಯರಿಂಗ್, ಸ್ನಾತಕ್ಕೋತ್ತರ ಪದವಿ ಸೇರಿದಂತೆ ಉನ್ನತ ವ್ಯಾಸಂಗ ಮಾಡುತ್ತಿರುವ ಶೇ. 60 ಕ್ಕಿಂತಲೂ ಹೆಚ್ಚಿನ ಅಂಕಗಳಿಸಿದ ದಲಿತ ವಿದ್ಯಾರ್ಥಿಗಳು ಹಾಗೂ ಎಸ್‍ಎಸ್‍ಎಲ್‍ಸಿಯಲ್ಲಿ ಶೇ. 90ಕ್ಕಿತಂಲೂ ಹೆಚ್ಚಿನ ಫಲಿತಾಂಶ ಪಡೆದ ಶಾಲೆಗಳ ಶಿಕ್ಷಕರುಗಳನ್ನೂ ಸನ್ಮಾನಿಸಲಾಗುತ್ತದೆ.

ಕೊಡವ ಸಮಾಜದಿಂದ: ಇಲ್ಲಿನ ಕೊಡವ ಸಮಾಜದ ವತಿಯಿಂದ ಸಮಾಜದ ಸಭಾಂಗಣದಲ್ಲಿ ಕೈಲ್‍ಮುಹೂರ್ತ ಸಂತೋಷ ಕೂಟ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.

ಕರವೇ ಘಟಕದಿಂದ: ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಾಹಿತ್ಯ ಘಟಕದ ವತಿಯಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಬೆಳಿಗ್ಗೆ 10 ಗಂಟೆಗೆ ಗುರುವಂದನೆ ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದೆ.

ಹಿಂದೂ ಮಲಯಾಳ ಸಮಾಜದಿಂದ: ತಾಲೂಕು ಹಿಂದೂ ಮಲಯಾಳ ಸಮಾಜದ ವತಿಯಿಂದ ಓಣಂ ಉತ್ಸವ ಆಚರಣೆ ತಾ. 25ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.