ಸುಂಟಿಕೊಪ್ಪ, ಜು. 25: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸೋಲಾರ್ ದೀಪಗಳನ್ನು ವಿತರಿಸಲಾಯಿತು.
ಸುಂಟಿಕೊಪ್ಪ ಪಂಚಾಯಿತಿ ವ್ಯಾಪ್ತಿಯಲ್ಲಿ ನಲೆಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಶೇ. 25 ಅನುದಾನದಲ್ಲಿ 15 ಕುಟುಂಬಕ್ಕೆ ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಹಾಗೂ ಉಪಾಧ್ಯಕ್ಷ ಪಿ.ಆರ್. ಸುಕುಮಾರ್ ಸೋಲಾರ್ ದೀಪಗಳನ್ನು ವಿತರಿಸಿದರು.