ಕೂಡಿಗೆ, ಅ. 30: ಐಎನ್‍ಟಿಯೂಸಿ ಹಾಗೂ ಸಹಭಾಗಿತ್ವದ ಸಂಸ್ಥೆಯಾದ ಡಿಐಎಸ್‍ಸಿ (ಡಿಸ್ಕ್), ಕೂಡಿಗೆ ಕಾರ್ಪೋರೇಷನ್ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ (ಕಾಬ್ಸೆಟ್) ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಕಾರ್ಮಿಕ ಮಹಿಳಾ ಮತ್ತು ಪುರುಷರ ಸ್ವ-ಸಹಾಯ ಗುಂಪುಗಳಿಗೆ ಮಾಹಿತಿ ಕಾರ್ಯಾಗಾರ ಕೂಡಿಗೆಯ ಕಾರ್ಪೋರೇಷನ್ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆ ಯನ್ನು ಕರ್ನಾಟಕ ರಾಜ್ಯ ಐಎನ್‍ಟಿಯುಸಿ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಬ್ಸೆಟ್ ಸಂಸ್ಥೆಯ ನಿರ್ದೇಶಕ ನಾಗೇಂದ್ರ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಐಎನ್‍ಟಿಯುಸಿ ಅಧ್ಯಕ್ಷ ಟಿ.ಪಿ. ಹಮೀದ್ ವಹಿಸಿದ್ದರು.

ವೇದಿಕೆಯಲ್ಲಿ ಕೊಡಗು ಜಿಲ್ಲಾ ಐಎನ್‍ಟಿಯುಸಿ ಪ್ರಧಾನ ಕಾರ್ಯದರ್ಶಿ ಧರ್ಮಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಉಪÀಸ್ಥಿತರಿದ್ದರು. ತರಬೇತಿಯಲ್ಲಿ 200ಕ್ಕೂ ಅಧಿಕ ಸ್ವ-ಸಹಾಯ ಗುಂಪಿನ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಗೋವಿಂದ್‍ರಾಜ್ ದಾಸ್ ಸ್ವಾಗತಿಸಿ, ಪಾರ್ವತಿ ವಂದಿಸಿದರು.