ಸುಂಟಿಕೊಪ್ಪ, ಸೆ.26 : ಕೊಡಂಗಲ್ಲೂರು ವೆಳ್ಳಾಪಾಡಿ ಸಂಘದ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಸ್ವಸ್ಥ ಶಾಲೆಯಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿತ್ತು. ಪೂಕಳಂ ರಂಗೋಲಿ ಸ್ಪರ್ಧೆ, ಸಂಗೀತ ಸ್ಪರ್ಧೆ, ನೃತ್ಯ ಸ್ಪರ್ಧೆಯನ್ನು ವಿಶೇಷ ಮಕ್ಕಳಿಗೆ ಆಯೋಜಿಸಲಾಗಿತ್ತು.

ಸಂಘದ ಅಧ್ಯಕ್ಷ ವಿ.ಎನ್. ವಿಶಾನ್ ಈ ಸಂದರ್ಭದಲ್ಲಿ ಮಾತನಾಡಿ, ಸಂಘವು ರಂಗಸಮುದ್ರ ವೃದ್ಧಾಶ್ರಮ ಹಾಗೂ ಸ್ವಸ್ಥ ಪುನರ್ ಶಾಲೆ ಮತ್ತಿತರೆಡೆಗಳಲ್ಲಿ ಓಣಂ ಹಬ್ಬದ ಪ್ರಯುಕ್ತ ಸಾಂಸ್ಕøತಿಕ ಕಾರ್ಯಕ್ರಮ ಗಳನ್ನು ನಡೆಸುತ್ತಿದೆ. ಅನಾರೋಗ್ಯ ದಿಂದ ಬಳಲುವವರಿಗೆ, ಅಪಘಾತ ದಿಂದ ಗಾಯಗೊಂಡವರಿಗೆ ನೆರವನ್ನು ನೀಡುತ್ತಾ ಬರುತ್ತಿದ್ದೇವೆ. ಬಡವರ್ಗದ ಮಕ್ಕಳ ವಿದ್ಯಾಭ್ಯಾಸಕ್ಕೂ ನೆರವು ಸಮಾಜದ ವತಿಯಿಂದ ಕಲ್ಪಿಸಲಾ ಗುತ್ತಿದ್ದು, ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಕೆ. ಲೋಕೇಶ್ ಮಾತನಾಡಿ, ಸಂಘ ಸಾಮಾಜಿಕ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಹಿಂದುಳಿದ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದೆ. ನಮ್ಮ ಸಂಸ್ಕøತಿ ಆಚಾರ ವಿಚಾರಗಳು ನಮ್ಮ ಆಧುನಿಕ ಯುಗದ ಜಂಜಾಟದಲ್ಲಿ ಮರೆಯಾಗುತ್ತಿದೆ. ಇಂದಿನ ಯುವ ಪೀಳಿಗೆ ಆಚಾರ-ವಿಚಾರವನ್ನು ಮುಂದಿನ ಪೀಳಿಗೆಗೂ ಕೊಂಡ್ಯೊಯ್ಯವ ದಿಸೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಒತ್ತು ನೀಡುತ್ತಿರುವದು ಶ್ಲಾಘನೀಯವಾದುದು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಸ್ವಸ್ಥ ಸಂಸ್ಥೆಯ ನಿರ್ದೇಶಕಿ ಗಂಗಾಚಂಗಪ್ಪ ವಹಿಸಿದ್ದರು.

ವೇದಿಕೆಯಲ್ಲಿ ಸ್ವಸ್ಥ ಉಪನಿರ್ದೇಶಕಿ ತೇಲಪಂಡ ಆರತಿಸೋಮಯ್ಯ, ಸಂಘದ ರಕ್ಷಣಾಧಿಕಾರಿ ಪಿ.ಆರ್. ಶಿವದಾಸ್, ಪ್ರಧಾನ ಕಾರ್ಯದರ್ಶಿ ಶಾಲಿನಿ ಸಹಕಾರ್ಯದರ್ಶಿ ಸಂದೀಪ್ ಕುಮಾರ್, ಖಜಾಂಚಿ ಸತೀಶ್, ಸಂಘದ ಪದಾಧಿಕಾರಿಗಳು ಹಾಗೂ ಸ್ವಸ್ಥ ಶಾಲೆಯ ಶಿಕ್ಷಕರು, ವಿಶೇಷ ಮಕ್ಕಳು ಉಪಸ್ಥಿತರಿದ್ದರು.