ಮಡಿಕೇರಿ, ಜ. 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪದವಿ ಪೂರ್ವ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವವು ತಾ. 12 ರಂದು ಬೆಳಗ್ಗೆ 11 ಗಂಟೆಗೆ ನಗರದ ಸಂತ ಜೋಸೆಫರ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದರಾದ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಪದ್ಮಿನಿ ಪೊನ್ನಪ್ಪ, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಮತ್ತಿತರರು ಭಾಗವಹಿಸಲಿದ್ದಾರೆ. ಮೈಸೂರಿನ ರಾಮಕೃಷ್ಣ ಆಶ್ರಮದ ಉಪನ್ಯಾಸಕರಾದ ಎಸ್.ಎಸ್.ರಮೇಶ್ ಉಪನ್ಯಾಸ ನೀಡಲಿದ್ದಾರೆ.

ಕಾನೂನು ಶಿಬಿರ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಎಫ್.ಎಂ.ಕೆ.ಎಂ.ಸಿ. ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ತಾ. 12 ರಂದು ಬೆಳಗ್ಗೆ 10 ಗಂಟೆಗೆ ನಗರದ ಎಫ್.ಎಂ.ಕೆ.ಎಂ.ಸಿ. ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಕಾನೂನು ಶಿಬಿರ ನಡೆಯಲಿದೆ.

1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪವನೇಶ್, ಎಫ್.ಎಂ.ಕೆ.ಎಂ.ಸಿ. ಕಾಲೇಜು ಪ್ರಾಂಶುಪಾಲರಾದ ಪಾರ್ವತಿ ಅಪ್ಪಯ್ಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಮಾಧವ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಎ.ಸಿ. ಶಿವಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.