ಸೋಮವಾರಪೇಟೆ, ಸೆ. 23 : ತಾಲೂಕು ಹಿಂದೂ ಮಲಯಾಳಿ ಸಮಾಜದ ವತಿಯಿಂದ ತಾ. 25 ರಂದು ಓಣಂ ಹಬ್ಬ ಆಚರಣೆ, ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಪಿ.ಡಿ. ಪ್ರಕಾಶ್ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. 25ರಂದು ಬೆಳಿಗ್ಗೆ 7ರಿಂದ ಸಂಜೆ 7 ಗಂಟೆ ಯವರೆಗೆ ಇಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಓಣಂ ಉತ್ಸವ ಆಚರಣೆ ನಡೆಯಲಿದೆ. ಬೆಳಿಗ್ಗೆ 7 ರಿಂದ 9 ರವರೆಗೆ ಪೂಕಳಂ ಸ್ಪರ್ಧೆ ನಡೆಯಲಿದ್ದು, ಮಹಿಳಾ ಘಟಕದ ಅಧ್ಯಕ್ಷೆ ರಾಣಿ ಸಂತೋಷ್ ಸ್ಪರ್ಧೆ ಉದ್ಘಾಟಿಸಲಿದ್ದಾರೆ ಎಂದರು.

9 ಗಂಟೆಗೆ ಶ್ರೀ ಮುತ್ತಪ್ಪ ದೇವಾಲಯದಿಂದ ಸಿಂಗಾರಿ ಮೇಳ ವಾದ್ಯಗೋಷ್ಠಿಯೊಂದಿಗೆ ಓಣಾ ಘೋಷ ಯಾತ್ರೆ ನಡೆಯಲಿದೆ. ಇದಕ್ಕೆ ಉತ್ಸವ ಸಮಿತಿ ಅಧ್ಯಕ್ಷ ವಿ.ಎಂ. ವಿಜಯ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕಲ್ಯಾಣ ಮಂಟಪದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಶಾಸಕ ರಂಜನ್ ಉದ್ಘಾಟಿಸಲಿದ್ದು, ಪಿ.ಡಿ. ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಬಿ.ಎ. ಜೀವಿಜಯ ಅವರು ಕೈಪಿಡಿ ಬಿಡುಗಡೆಗೊಳಿಸಲಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಸಮಾಜದ ಸಲಹೆಗಾರ ವಿ.ಕೆ. ಲೋಕೇಶ್, ಕುಶಾಲನಗರ ಸಮಾಜದ ಶಿವನ್, ವೀರಾಜಪೇಟೆಯ ಹರ್ಷವರ್ಧನ, ಸುಂಟಿಕೊಪ್ಪದ ಪಿ.ಸಿ. ಮೋಹನ್, ಚೆಟ್ಟಳ್ಳಿಯ ಶಶಿಕುಮಾರ್, ಮೂರ್ನಾಡಿನ ಕೆ. ಬಾಬು, ಕಾಜೂರಿನ ಭಾಸ್ಕರ್, ಮರಗೋಡಿನ ಬಾಲಕೃಷ್ಣನ್ ಅವರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹತ್ತನೇ ತರಗತಿ, ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ, ಸಿ.ಎ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಮತ್ತು ಸಮಾಜದ ಮಾಜೀ ಸೈನಿಕರಿಗೆ ಸನ್ಮಾನ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಓಣಂ ಸದ್ಯ, 3 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಗೋಷ್ಠಿಯಲ್ಲಿದ್ದ ಉತ್ಸವ ಸಮಿತಿ ಅಧ್ಯಕ್ಷ ವಿ.ಎಂ. ವಿಜಯ ತಿಳಿಸಿದರು.

ಪೂಕಳಂ ಸ್ಪರ್ಧೆಯ ನಿಬಂಧನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಭಾಗವಹಿಸುವ ತಂಡಗಳು ಮೊ: 9448246061, 9448720917 ಸಂಖ್ಯೆಗಳನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು. ಗೋಷ್ಠಿಯಲ್ಲಿ ಸಮಾಜದ ಪ್ರಮುಖರಾದ ಎಸ್. ಐಯ್ಯಪ್ಪ, ವಿನೋದ್‍ಕುಮಾರ್, ಜನಾರ್ಧನ್, ರಾಧಾಕೃಷ್ಣ, ವೇಲಾಯುಧನ್ ಉಪಸ್ಥಿತರಿದ್ದರು.